ಚಾಮರಾಜನಗರ:- ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ, ಶ್ರೀ ಭಗೀರಥ ಮಹರ್ಷಿ ಹಾಗೂ ಶ್ರೀ ಕನಕದಾಸರ ಪುತ್ಥಳಿಗಳನ್ನು ಅಯೋಧ್ಯೆಯ ಶ್ರೀರಾಮಲಲ್ಲಾ ಶಿಲ್ಪದ ನಿರ್ಮಾತೃ ಮೈಸೂರಿನ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರು ನಿರ್ಮಿಸಲಿದ್ದು ಇವರನ್ನು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸನ್ಮಾನಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಸನ್ಮಾನಿಸುವ ಮೂಲಕ ಶ್ರೀ ಮಹರ್ಷಿ ವಾಲ್ಮೀಕಿ, ಶ್ರೀ ಭಗೀರಥ ಮಹರ್ಷಿ ಹಾಗೂ ಶ್ರೀ ಕನಕದಾಸರ ಪುತ್ಥಳಿಗಳ ನಿರ್ಮಾಣಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ನಂಜುಂಡಯ್ಯ, ಇನ್ನಿತರ ಅದಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ, ಶ್ರೀ ಭಗೀರಥ ಮಹರ್ಷಿ ಹಾಗೂ ಶ್ರೀ ಕನಕದಾಸರ ಪುತ್ಥಳಿಗಳ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಿದ್ದರು.