ಬೆಂಗಳೂರು ಗ್ರಾಮಾಂತರ : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ನಿಲ್ಲಿಸಿದ್ದ ಇಂಡಿಗೋ ವಿಮಾನಕ್ಕೆ ಟೆಂಪೋ ಟ್ರಾವೆಲ್ಲರ್ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಕೂದಲಳತೆ ಅಂತರದಲ್ಲಿ ಏರ್ಪೋಟ್ ನಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.
ಇಂಜಿನ್ ರಿಪೇರಿಯಿಂದಾಗಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಟಿಟಿ ವಾಹನದ ಟಾಪ್ ನಜ್ಜುಗುಜ್ಜಾಗಿದೆ. ಟಿಟಿ ವಾಹನದ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.
ಚಲಿಸುತ್ತಿರುವಾಗಲೇ ಪಲ್ಟಿ: ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಉರಿದ ಲಾರಿ!
ಕಳೆದ ಹಲವು ದಿನಗಳಿಂದ ಏರ್ಪೋಟ್ ಒಳಭಾಗದ ಆಲ್ಪಾ ಪಾರ್ಕಿಂಗ್ ಬೇ 71 ರಲ್ಲಿ ಇಂಡಿಗೋ ವಿಮಾನವು ಇಂಜಿನಿ ರಿಪೇರಿಯಿಂದಾಗಿ ನಿಂತಿತ್ತು. ಏರ್ಪೋಟ್ ಒಳ ಭಾಗದಲ್ಲಿ ವಿಮಾನಗಳಿಗೆ ಸಿಬ್ಬಂದಿಯನ್ನ ಕರೆದುಕೊಂಡು ಹೋಗಿ ಬಿಡುತ್ತಿದ್ದ ಟಿಟಿ ವಾಹನವು , ಸಿಬ್ಬಂದಿಯನ್ನ ಬಿಟ್ಟು ಬರ್ತಿದ್ದ ವೇಳೆ ನಿಂತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದಲೇ ಅವಘಡ ನಡೆದಿದ್ದು, ನಾಗರೀಕ ವಿಮಾನಯಾನ ಇಲಾಖೆ ಅಧಿಕಾರಿಗಳು ಮತ್ತು ಏರ್ಪೋಟ್ ಸಿಬ್ಬಂದಿ ಘಟನೆ ಕುರಿತು ತನಿಖೆ ಕೈಗೊಂಡಿದ್ದಾರೆ.