ನವದೆಹಲಿ/ ಇಸ್ಲಾಮಾಬಾದ್:- ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಭಾರತ ಪ್ರತೀಕಾರ ತೀರಿಸಿಕೊಳ್ಳಲು ಸಿದ್ಧತೆ ನಡೆಸಿದೆ. ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ ಬಿಗುವಾಗಿದೆ. ಈ ನಡುವೆ ಪಾಕ್‌ನ ನಾಯಕರಲ್ಲಿ ಆತಂಕಕ್ಕೆ ಹೆಚ್ಚಾಗುತ್ತಿದೆ.
ಈ ಮಧ್ಯೆಯೇ ,ಪಾಕ್ ಗುಪ್ತಚರ ಸಂಸ್ಥೆಪರ ಕೆಲಸ ಮಾಡುತ್ತಿದ್ದ ಇಬ್ಬರನ್ನು ಪಂಜಾಬ್ ನ ಅಮೃತಸರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆರೋಪಿಗಳು ಅಮೃತಸರದಲ್ಲಿರುವ ಸೇನಾ ಅಂಟಾನ್ಮೆಂಟ್ ಪ್ರದೇಶ, ವಾಯುನೆಲೆಗಳ ಸೂಕ್ಷ್ಮ ಮಿಲಿಟರಿ ಮಾಹಿತಿ ಮತ್ತು ಫೋಟೋಗಳನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಕಳುಹಿಸಿದ್ದರು.
ಶನಿವಾರ ಶೇರ್ ಮಾಸಿಹ್ ಮತ್ತು ಸೂರಜ್ ಮಾಸಿಹ್ ಬಂಧನ ಮಾಡಲಾಗಿದ್ದು ಸದ್ಯ ಇವರನ್ನು ಅಮೃತಸರ ಕೇಂದ್ರ ಜೈಲಿಗೆ ಕಳುಹಿಸಲಾಗಿದೆ. ಪಂಜಾಬ್ ಡಿಜಿಪಿ ಗೌರವ್ ಯಾದವ್ ಪ್ರತಿಕ್ರಿಯಿಸಿ, ಪ್ರಾಥಮಿಕ ತನಿಖೆಯ ವೇಳೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಜೊತೆ ಇವರು ಸಂಪರ್ಕ ಹೊಂದಿದ್ದರು. ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.