ಬೆಂಗಳೂರು: ಸಿಸಿಬಿ ಪೊಲೀಸರ ಹೆಸರಿನಲ್ಲಿ ಲಕ್ಷ ಲಕ್ಷ ವಸೂಲಿ ಮಾಡುತ್ತಿದ್ದ ಇಬ್ಬರು ನಗರ ಪೊಲೀಸ್ ಸಿಬ್ಬಂದಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮೆಹಬೂಬ್ ಮತ್ತು ಯುವರಾಜ್ ಬಂಧಿತ ಆರ್ ಟಿನಗರ ಪೇದೆಗಳಾಗಿದ್ದು,
ದಾವಣಗೆರೆಗೆ ಹೋಗಿ ಸೇಟು ಓರ್ವನನ್ನು ಬೆದರಿಸಿ ಲಕ್ಷ ಲಕ್ಷ ವಸೂಲಿ ಮಾಡಿದ್ದಾರೆ. ಅದಲ್ಲದೆ ದಾವಣಗೆರೆ ಜಿಲ್ಲೆಯ ಓರ್ವ ಪೊಲೀಸ್ ಸಿಬ್ಬಂದಿ ಕೂಡ ಭಾಗಿಯಾಗಿದ್ದಾರೆಂದು ತಿಳಿದು ಬಂದಿದೆ.
Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!
ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ದೂರು ಬಂದಿದ್ದು, ದೂರು ದಾಖಲಿಸಲು ಬಿ ದಯಾನಂದ ಸಿಸಿಬಿಗೆ ಸೂಚಿಸಿದ್ದರು. ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಎಫ್ ಐ ಆರ್ ದಾಖಲು ಮಾಡಿ ಇಬ್ಬರು ಪೇದೆಗಳನ್ನು ಬಂಧಿಸಿದ್ದಾರೆ.