ಹುಬ್ಬಳ್ಳಿ: ಆ್ಯಪ್‌ವೊಂದರಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಹಣ ಗಳಿಸಬಹುದೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 28 ಲಕ್ಷ ರೂಪಾಯಿ ವಂಚಿಸಿರುವ ಕುರಿತಂತೆ ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡದ ನಿವಾಸಿ ನಂದೀಶ ಎಂಬುವರು ಆನ್‌ಲೈನ್‌ನಲ್ಲಿ ಹೂಡಿಕೆಯ ಆ್ಯಪ್ ಗಮನಿಸಿ, ಬ್ಯಾಂಕ್ ಖಾತೆಯಿಂದ 30 ಲಕ್ಷ ವರ್ಗಾಯಿಸಿದ್ದಾರೆ. 2 ಲಕ್ಷವನ್ನಷ್ಟೇ ಹಿಂದಿರುಗಿಸಿ, ಉಳಿದ ಹಣ ನೀಡದೆ ವಂಚಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್ ಆಗ್ತೀರಾ..
12.15 ಲಕ್ಷ ವಂಚನೆ:
ಮತ್ತೊಂದು ಪ್ರಕರಣದಲ್ಲಿ ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿದರೆ ಅಧಿಕ ಹಣ ಗಳಿಸುವ ಅಸೆ ತೋರಿಸಿ ವ್ಯಕ್ತಿಯೊಬ್ಬರಿಂದ 12.15 ಲಕ್ಷ ವರ್ಗಾಯಿಸಿಕೊಂಡು ವಂಚಿಸಲಾಗಿದೆ.
ಧಾರವಾಡದ ನಿವಾಸಿ ಮದನ ಅವರಿಗೆ ಅಪರಿಚಿತರು ವಾಟ್ಸ್ ಆ್ಯಪ್ ಮೂಲಕ ಲಿಂಕ್ ಕಳುಹಿಸಿದ್ದಾರೆ. ಮೊದಲು 150 ರೂ. ಹೂಡಿಕೆ ಮಾಡಿದ್ದಕ್ಕೆ ಪ್ರತಿಯಾಗಿ 1,300 ರೂ. ನೀಡಿ ನಂಬಿಸಿದ್ದಾರೆ. ನಂತರ 12.15 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾರೆಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ