ಬೆಂಗಳೂರು:– ಊಬರ್, ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರ ವರೆಗೆ ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರಿದ್ದ ನ್ಯಾಯಪೀಠದಿಂದ ಆದೇಶ ಹೊರಡಿಸಲಾಗಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು, ರೋಪೆನ್ ಟ್ರಾನ್ಸ್ಫರ್ಮೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಪ್ರಕಾರ, ಕರ್ನಾಟಕದಲ್ಲಿ ಆರು ಲಕ್ಷಕ್ಕೂ ಹೆಚ್ಚು ನೋಂದಾಯಿತ ಬೈಕ್ ಟ್ಯಾಕ್ಸಿಗಳಿದ್ದು, ಆ ಮೂಲಕ ಸವಾರರು ತನ್ನ ಜೀವನ ನಡೆಸುತ್ತಿದ್ದಾರೆ. ಒಂದು ವೇಳೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದರೇ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಬಹುದು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರವು ಪ್ರಸ್ತುತ ಬೈಕ್ ಟ್ಯಾಕ್ಸಿಗಳಿಗಾಗಿ ಸಮಗ್ರ ನೀತಿಯನ್ನು ರೂಪಿಸುತ್ತಿದೆ. ಕೈಗೆಟುಕುವ ಬೆಲೆ ಮತ್ತು ಬೇಡಿಕೆ ಹಿನ್ನೆಲೆ ಬೈಕ್ ಟ್ಯಾಕ್ಸಿ ಸೇವೆಗಳು ನಗರ ಪ್ರದೇಶದಲ್ಲಿ ಹೆಚ್ಚುತ್ತಿವೆ. ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಜೂನ್ 15ರ ವರೆಗೆ ನಡೆಸಲು ವಿಸ್ತರಣೆ ಮಾಡಿ ವಿಚಾರಣೆ ಮುಂದೂಡಿದೆ.