ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗೋಕುಲ್ ರಸ್ತೆಯ ಲೋಹಿಯಾ ನಗರದಲ್ಲಿರುವ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಸಾಥ್ ನೀಡಿದರು.
Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!
ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿನ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕಾಮಗಾರಿ ಪ್ರಗತಿ ಪರಿಶೀಲನೆ ವೇಳೆ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ ಸಚಿವರು ಹಾಗೂ ಶಾಸಕರು ಮಾಹಿತಿ ಪಡೆದುಕೊಂಡರು. ಇನ್ನೂ ಸ್ಮಾರ್ಟ್ ಸಿಟಿಯ ಟೈಮ್ ಬಾಂಡ್ ಮುಗಿದಿದ್ದರೂ ಕೂಡ ಕಾಮಗಾರಿ ಪ್ರಗತಿಯಲ್ಲಿರುವ ಬಗ್ಗೆ ಹಾಗೂ ಕ್ರೀಡೆಗೆ ಪೂರಕವಾದ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.