ಉಡುಪಿ: ಅಪರಿಚಿತ ವಾಹನವೊಂದು ತಡರಾತ್ರಿ ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ,ಪಾದಚಾರಿ ಮೃತಪಟ್ಟ ಘಟನೆ ಸಂಭವಿಸಿದೆ. ನಿಟ್ಟೂರು ಸಮೀಪ ರಾಷ್ಟ್ರೀಯ ಹೆದ್ದಾರಿ ಗಣೇಶ್ ಮಾರ್ಬಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಕುಂದಾಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿ ಹೊಡೆದಿರಬಹುದೆಂದು ಶಂಕಿಸಲಾಗಿದ್ದು, ಸಂಚಾರ ಪೋಲಿಸ್ ಠಾಣೆಯ ಪೋಲಿಸರು ಸ್ಥಳಕ್ಕಾಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು.
ನವಲಿ ಸಮಾನಾಂತರ ಅಣೆಕಟ್ಟು ಬದಲು ನಮ್ಮ ಪಾಲಿನ ನೀರನ್ನು ಪಂಪ್ ಮಾಡಿ ಬಳಸಿಕೊಳ್ಳಲು ಚಿಂತನೆ: DCM ಡಿ.ಕೆ.ಶಿ!
ಪೋಲಿಸರು ಸಾವಿಗೆ ಕಾರಣವಾಗಿರುವ ವಾಹನದ ಪತ್ತೆ ಕಾರ್ಯ, ಸಿ ಸಿ ಕ್ಯಾಮರಾ ಪರೀಶೀಲನೆ ನಡೆಸುತ್ತಿದ್ದಾರೆ.
ಡಿಕ್ಕಿ ಹೊಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಗಾಯಾಳುವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಪರೀಕ್ಷಿಸಿದ ವೈದ್ಯರು ಗಾಯಾಳು ಅದಾಗಲೇ ಮೃತಪಟ್ಟಿರುವುದನ್ನು ದೃಢೀಕರಿಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಮೃತ ಪಾದಚಾರಿ ಯುವಕನ ಹೆಸರು ವಿಳಾಸ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.