ಹಾಸನ:- ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರಿದಿದೆ. ತೀವೃ ಹೃದಯಾಘಾತದಿಂದ ಕುಳಿತಲ್ಲೇ ವ್ಯಕ್ತಿಯೋರ್ವ ಪ್ರಾಣಬಿಟ್ಟ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಗರೆ ಗ್ರಾಮದಲ್ಲಿ ಜರುಗಿದೆ.
ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ KSRTC ಬಸ್: ತಪ್ಪಿದ ದುರಂತ- ಕಂಡಕ್ಟರ್ ಹೇಳಿದ್ದೇನು?
ಅಡವಿಬಂಟೇನಹಳ್ಳಿ ಗ್ರಾಮದ ನಿರ್ವಾಣಿಗೌಡ (63) ಮೃತಪಟ್ಟ ವ್ಯಕ್ತಿ. ಮೃತ ನಿರ್ವಾಣಿಗೌಡ ಇಂದು ಮನೆಗೆ ದಿನಸಿ ಸಾಮಾಗ್ರಿಗಳನ್ನು ತರಲು ಬೈಕ್ನಲ್ಲಿ ಹಗರೆಗೆ ಬಂದಿದ್ದರು. ನ್ಯಾಯಬೆಲೆ ಅಂಗಡಿ ಬಳಿ ಕುಳಿತಿದ್ದಾಗ ಇದ್ದಕಿದ್ದ ಹಾಗೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ಒಂದು ಗಂಟೆ ಸಮಯದಲ್ಲಿ ಈ ಘಟನೆ ಜರುಗಿದೆ.
ಈ ಮೂಲಕ ಹಾಸನ ಜಿಲ್ಲೆಯಲ್ಲಿ ಕಳೆದ ಒಂದುವರೆ ತಿಂಗಳಿನಲ್ಲಿ 36 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.