Close Menu
Ain Live News
    Facebook X (Twitter) Instagram YouTube
    Monday, June 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಭದ್ರಾ ಮೇಲ್ದಂಡೆ: 5300 ಕೋಟಿ ಘೋಷಣೆ ಮಾಡಿ ನಯಾಪೈಸೆ ಕೊಟ್ಟಿಲ್ಲ: ನಿರ್ಮಲಾ ಸೀತಾರಾಮನ್ ವಿರುದ್ಧ ಸಿದ್ದು ಕಿಡಿಕಿಡಿ

    By Author AINMay 14, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

    ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ  ಕೇಂದ್ರ ಬಜೆಟ್‌ ನಲ್ಲಿ 5360 ಕೋಟಿ ಅನುದಾನ ಘೋಷಣೆಯಾಗಿದ್ದರೂ, ಒಂದು ರೂಪಾಯಿ ಕೂಡಾ ಈವರೆಗೂ ಬಿಡುಗಡೆ ಆಗಿಲ್ಲ. ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಎರಡು ಬಾರಿ ನಿಯೋಗದೊಂದಿಗೆ ಭೇಟಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು-ಪಾರು ಅಂತಲೂ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು ಎಂದರು.

    ಅವಧಿಪೂರ್ವ ಮುಂಗಾರು ಪ್ರವೇಶ: ರೈತರಿಗೆ ಬಿತ್ತನೆಬೀಜ ನೀಡಲು ಕೃಷಿ ಇಲಾಖೆ ತಯಾರಿ

    ಕೇಂದ್ರ ಸರ್ಕಾರಕ್ಕೆ , ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನಿಗೆ  ರಾಜ್ಯ ಸರ್ಕಾರದಿಂದ ಮೇಲಿಂದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ, ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದರು.

    11495 ಕೋಟಿ ಬಂದಿಲ್ಲ

    15ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11495  ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ.

    ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ. ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಸಿಎಂ ಟೀಕಿಸಿದರು.

    ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತಾರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ  ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಸಿಎಂ ತಿಳಿಸಿದರು.

    ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ.  ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ ಎಂದು ಪ್ರಶ್ನಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ!

    June 2, 2025

    ನಾವು – ತಮಿಳರು ನೆರೆಹೊರೆಯವರು, ಸೌಹಾರ್ದತೆಯಿಂದ ಬಾಳಬೇಕು: ಡಿಕೆ ಶಿವಕುಮಾರ್

    June 2, 2025

    ಕನ್ನಡ ನಾಡಿನಲ್ಲಿ ತಮಿಳು ಸಿನಿಮಾಗಳು ನೂರಕ್ಕಿಂತ ಹೆಚ್ಚು ದಿನ ಓಡುತ್ತವೆ: ಶಿವರಾಮೇಗೌಡ

    June 2, 2025

    RCB ಗೆಲ್ಲಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ವಿಶೇಷ ಪ್ರಾರ್ಥನೆ ಮಾಡುತ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್

    June 2, 2025

    ಗುಡ್ ನ್ಯೂಸ್: LPG ಗ್ಯಾಸ್ ಬೆಲೆ ಇಳಿಕೆ..! ಯಾವ ನಗರಗಳಲ್ಲಿ ಎಷ್ಟು.? ಇಲ್ಲಿದೆ ಮಾಹಿತಿ

    June 2, 2025

    ಫ್ರೀ.. ಫ್ರೀ.. ಫ್ರೀ.. RCB ಕಪ್ ಗೆದ್ದರೆ ಮಸಾಲಪುರಿ, ಪಾನಿಪುರಿ, ಭೇಲ್ ಪುರಿ ಉಚಿತ..!

    June 2, 2025

    ʼಥಗ್‌ ಲೈಫ್‌ʼ ಬಿಡುಗಡೆಗೆ ಸಂಕಷ್ಟ: ಕಾನೂನು ಮೊರೆ ಹೋದ ಕಮಲ್ ಹಾಸನ್!

    June 2, 2025

    ವಿರಾಟ್ ಕೊಹ್ಲಿ-ಶ್ರೇಯರ್ ಅಯ್ಯರ್‌ನ್ನು ಶ್ಲಾಘಿಸಿದ ಬಾಹುಬಲಿ ನಿರ್ದೇಶಕ…ಯಾರಿಗೆ ʼಕಪ್ʼ ರಾಜಮೌಳಿ ಹೇಳಿದ್ದೇನು?

    June 2, 2025

    Cardamom: ನಿಮ್ಮ ಮನೆಯ ಬಾಲ್ಕನಿಯಲ್ಲಿ “ಮಸಾಲೆಗಳ ರಾಣಿ” ಬೆಳೆಯಬಹುದು..! ಹೇಗೆ ಗೊತ್ತಾ..?

    June 2, 2025

    ಕನ್ನಡ ವಿರೋಧಿ ಕಮಲ್ ಹಾಸನ್‌ಗೆ ಕನ್ನಡ ಪುಸ್ತಕ ಕೊಟ್ಟ ʼಕನ್ನಡತಿʼ! Video ವೈರಲ್!

    June 2, 2025

    ಆಭರಣ ಪ್ರಿಯರಿಗೆ ಬಿಗ್ ಶಾಕ್: ಇಂದು ಮತ್ತೆ ಭಾರಿ ಏರಿಕೆಯಾದ ಬಂಗಾರದ ಬೆಲೆ: ಎಷ್ಟಿದೆ ನೋಡಿ ಇಂದಿನ ದರ

    June 2, 2025

    ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಸಚಿವ ಪರಮೇಶ್ವರ್ ಹೇಳಿದ್ದೇನು..?

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.