ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC 2024) ಅಖಿಲ ಭಾರತ ಸೇವೆಗಳ ನೇಮಕಾತಿಗಾಗಿ ನಡೆಸಿದ ನಾಗರಿಕ ಸೇವೆಗಳ 2024 ಪರೀಕ್ಷೆಯ ಅಂತಿಮ ಫಲಿತಾಂಶಗಳನ್ನು ಪ್ರಕಟಿಸಿದೆ. ಇಂದು ಮಧ್ಯಾಹ್ನ ಯುಪಿಎಸ್‌ಸಿ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಈ ಫಲಿತಾಂಶಗಳಲ್ಲಿ, ಇತರ ಹಲವು ರಾಜ್ಯಗಳ ವಿದ್ಯಾರ್ಥಿಗಳು ಸೇರಿದಂತೆ ರಾಜ್ಯಗಳ ಅನೇಕ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ.
ಒಟ್ಟು 1,009 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, 20178ರಿಂದ ಯುಪಿಎಸ್‌ಸಿ ತಯಾರಿ ನಡೆಸುತ್ತಿದ್ದ ಪ್ರಯಾಗ್‌ರಾಜ್‌ನ ಶಕ್ತಿ ದುಬೆ ಪ್ರಥಮ ರ‍್ಯಾಂಕ್‌ನೊಂದಿಗೆ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಹರ್ಷಿತಾ ಗೋಯಲ್ 2ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.
ನೀವು ಯಾವಾಗಲೂ ಯಂಗ್ ಆಗಿ ಕಾಣಿಸ್ಬೇಕಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 1,129 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಪೈಕಿ ಭಾರತೀಯ ಆಡಳಿತ ಸೇವೆ (IAS) ನ 180 ಹುದ್ದೆಗಳು, ಭಾರತೀಯ ವಿದೇಶಾಂಗ ಸೇವೆ (IFS) ನ 55 ಹುದ್ದೆಗಳು ಮತ್ತು ಭಾರತೀಯ ಪೊಲೀಸ್ ಸೇವೆ (IPS) ನ 147 ಹುದ್ದೆಗಳು ಸೇರಿವೆ.
ಫಲಿತಾಂಶದಲ್ಲಿ ಉತ್ತರ ಪ್ರದೇಶ (Uttar Pradesh) ಪ್ರಯಾಗ್‌ರಾಜ್ ಮೂಲದ ಶಕ್ತಿ ದುಬೆ, ಯುಪಿಎಸ್‌ಸಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದ ಶಕ್ತಿ ದುಬೆ, ಬನಾರಸ್ ವಿವಿಯಲ್ಲಿ ಜೀವ ರಸಾಯನಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 2018ರಿಂದಲೂ ಯುಪಿಎಸ್‌ಸಿಗೆ ತಯಾರಿ ನಡೆಸಿದ್ದ ಶಕ್ತಿ ಪರಿಶ್ರಮಕ್ಕಿಂದು ಫಲ ಸಿಕ್ಕಿದೆ.
ಯುಪಿಎಸ್‌ಸಿ ಟಾಪ್-10 ಟಾಪರ್ಸ್ ಯಾರು?
ಶಕ್ತಿ ದುಬೆ, ಹರ್ಷಿತಾ ಗೋಯೆಲ್, ಡೋಂಗ್ರೆ ಅರ್ಚಿತ್ ಪರಾಗ್, ಶಾ ಮಾರ್ಗಿ ಚಿರಾಗ್, ಆಕಾಶ್ ಗರ್ಗ್, ಕೋಮಲ್ ಪುನಿಯಾ, ಆಯುಷಿ ಬನ್ಸಾಲ್, ರಾಜ್ ಕೃಷ್ಣ ಝಾ, ಆದಿತ್ಯ ವಿಕ್ರಮ್ ಅಗರ್ವಾಲ್, ಮಾಯಾಂಕ್ ತ್ರಿಪಾಠಿ ಕ್ರಮವಾಗಿ ಅಗ್ರ 10 ರ‍್ಯಾಂಕ್‌ಗಳಲ್ಲಿದ್ದಾರೆ.
1009 ಅಭ್ಯರ್ಥಿಗಳು ತೇರ್ಗಡೆ:
ಕೇಂದ್ರ ಲೋಕಸೇವಾ ಆಯೋಗ (UPSC) 2024ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಒಟ್ಟು 1,009 ಅಭ್ಯರ್ಥಿಗಳನ್ನು ನೇಮಕಾತಿಗಾಗಿ ಆಯ್ಕೆ ಮಾಡಿದೆ. ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಸಾಮಾನ್ಯ ವರ್ಗದ 335, ಆರ್ಥಿಕವಾಗಿ ದುರ್ಬಲ ವರ್ಗ (ಇಡಬ್ಲ್ಯೂಎಸ್) 109, ಇತರ ಹಿಂದುಳಿದ ವರ್ಗಗಳು (ಒಬಿಸಿ) 318, ಪರಿಶಿಷ್ಟ ಜಾತಿ (ಎಸ್‌ಸಿ) 160 ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) 87 ಸೇರಿದಂತೆ ವಿವಿಧ ವರ್ಗಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.