ವಾಷಿಂಗ್ಟನ್: ಕಾಶ್ಮೀರದಲ್ಲಿ ನಡೆದ ಈ ಅಸಮರ್ಪಕ ದಾಳಿಯ ತನಿಖೆಗೆ ಪಾಕಿಸ್ತಾನ ಸಹಕರಿಸಬೇಕು ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ. ಕಳೆದ ಏಪ್ರಿಲ್ 22ರಂದು ಪಾಕಿಸ್ತಾನ ಉಗ್ರರು ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ನರಮೇಧ ನಡೆಸಿದರು. ಬೈಸರನ್ ವ್ಯಾಲಿಗೆ ಪ್ರವಾಸಕ್ಕೆ ಹೋಗಿದ್ದ 26 ಪ್ರವಾಸಿಗರನ್ನ ಬಲಿ ಪಡೆದರು.
ಈ ವಿಚಾರವಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಕರೆ ಮಾಡಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಮಾತುಕತೆ ನಡೆಸಿದ್ದಾರೆ.
ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!
ಭಯೋತ್ಪಾದನೆಯ ವಿರುದ್ಧ ಭಾರತದೊಂದಿಗೆ ಸಹಕರಿಸಲು ಯುಎಸ್ ಬದ್ಧವಾಗಿದೆ ಎಂದು ರುಬಿಯೊ ಸ್ಪಷ್ಟಪಡಿಸಿದ್ದಾರೆ. ಕಾಶ್ಮೀರದಲ್ಲಿ ನಡೆದ ಈ ಅಸಮರ್ಪಕ ದಾಳಿಯ ತನಿಖೆಗೆ ಪಾಕಿಸ್ತಾನ ಸಹಕರಿಸಬೇಕು ಎಂದು ಅಮೆರಿಕ ಒತ್ತಾಯಿಸಿದೆ.
ಪಹಲ್ಗಾಮ್ ದಾಳಿಯಿಂದ ಜೀವ ಕಳೆದುಕೊಂಡವರ ಬಗ್ಗೆ ಅಮೆರಿಕ ವಿಷಾದ ವ್ಯಕ್ತಪಡಿಸಿತು. ಭಯೋತ್ಪಾದನೆ ವಿರುದ್ಧ ಭಾರತಕ್ಕೆ ಸಹಕಾರ ನೀಡಲು ನಾವು ಬದ್ಧ. ಆದರೆ, ದಕ್ಷಿಣ ಏಷ್ಯಾದಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಶಾಂತಿ, ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಎಂದು ಜೈಶಂಕರ್ಗೆ ಕರೆ ಮಾಡಿ ರುಬಿಯೊ ಸಲಹೆ ನೀಡಿದ್ದಾರೆ.
ಪ್ರಧಾನಿ ಷರೀಫ್ ಅವರೊಂದಿಗೆ ಕರೆ ಮಾಡಿ ಮಾತನಾಡುವಾಗ, ಏಪ್ರಿಲ್ 22 ರಂದು ಕಾಶ್ಮೀರದಲ್ಲಿ ನಡೆದ ದಾಳಿಯನ್ನು ಪಾಕಿಸ್ತಾನ ಖಂಡಿಸಬೇಕು. ಜೊತೆಗೆ ತನಿಖೆಗೆ ಸಹಕರಿಸಬೇಕು ಎಂದು ತಿಳಿಹೇಳಿದ್ದಾರೆ.