ನವದೆಹಲಿ: ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಕುಟುಂಬ ಸಮೇತ ಭಾರತಕ್ಕೆ ಭೇಟಿ ನೀಡಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಜೆ.ಡಿ ವ್ಯಾನ್ಸ್, ಪತ್ನಿ ಉಷಾ ವ್ಯಾನ್ಸ್ ಹಾಗೂ ಮೂವರು ಮಕ್ಕಳಾದ ಇವಾನ್, ವಿವೇಕ್ ಮತ್ತು ಮಿರಾಬೆಲ್ ಇಂದು ಬೆಳಗ್ಗೆ 10 ಗಂಟೆಗೆ ದೆಹಲಿಯ ಪಾಲಂ ಏರ್ಪೋರ್ಟ್ಗೆ ಬಂದಿಳಿದಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಭಾರತ ಪ್ರವಾಸ ಮಾಡಲಿದ್ದಾರೆ.
ಪಾಲಂ ಏರ್ಪೋರ್ಟ್ನಲ್ಲಿ ಕೇಂದ್ರದ ಹಿರಿಯ ಸಚಿವರು ವ್ಯಾನ್ಸ್ ಕುಟುಂಬವನ್ನು ರಾಜಸ್ಥಾನಿ ಶೈಲಿಯಲ್ಲಿ ಸ್ವಾಗತಿಸಿದರು. ಬಳಿಕ ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ವ್ಯಾನ್ಸ್ ಕುಟುಂಬವು ಹಾರ ಹಾಕಿಕೊಂಡು ಪೋಸ್ ನೀಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ದೆಹಲಿ ನಂತರ ಜೈಪುರ ಹಾಗೂ ಆಗ್ರಾಕ್ಕೆ ವ್ಯಾನ್ಸ್ ಕುಟುಂಬ ಭೇಟಿ ನೀಡಲಿದೆ.
ಎಚ್ಚರ ಜನರೇ: ಜ್ವರ, ತಲೆನೋವು ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ!? ಇದು ಎಷ್ಟು ಡೇಂಜರ್ ಗೊತ್ತಾ?
ಇಂದು ಸಂಜೆ 6:30ರ ಸುಮಾರಿಗೆ ಜೆಡಿ ವ್ಯಾನ್ಸ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾರತ-ಯುಎಸ್ ದ್ವಿಪಕ್ಷೀಯ ಮಾತುಕತೆ ನಡೆಯಲಿದ್ದು, ವ್ಯಾಪಾರ ಒಪ್ಪಂದಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಜೊತೆಗೆ ಇದೇ ವೇಳೆ ಭಾರತದ ಮೇಲಿನ ಸುಂಕದ ಬಗ್ಗೆಯೂ ಚರ್ಚೆ ನಡೆಯಲಿದೆ.
ಮಾತುಕತೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ವ್ಯಾನ್ಸ್ ಕುಟುಂಬ ಮತ್ತು ಅವರ ಜೊತೆಗಿರುವ ಅಮೆರಿಕದ ಅಧಿಕಾರಿಗಳಿಗೆ ವಿಶೇಷ ಔತಣಕೂಟ ಆಯೋಜಿಸಿದ್ದಾರೆ. ಇದಾದ ನಂತರ ವ್ಯಾನ್ಸ್ ಕುಟುಂಬ ಜೈಪುರಕ್ಕೆ ತೆರಳಲಿದ್ದು, ಐಟಿಸಿ ಮೌರ್ಯ ಶೆರಾಟನ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.