ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದ ಪ್ರಕರಣ ಹಿನ್ನೆಲೆಯಲ್ಲಿ ಸಂಸದ ಇ. ತುಕಾರಾಂ ಮನೆ ಮೇಲೆ ಇಡಿ ದಾಳಿ ಮಾಡಿದೆ. ಬಳ್ಳಾರಿ ಜಿಲ್ಲೆ ಸಂಡೂರಲ್ಲಿರುವ ಇ ತುಕಾರಾಂ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದೀಗ ಸಂಸದ ತುಕಾರಾಂ ಅವರನ್ನು ಇಡಿ ವಶಕ್ಕೆ ಪಡೆದಿದೆ. ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಮೇಲೆ ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆದಿದೆ. ಬಳ್ಳಾರಿ ಚುನಾವಣೆಗೆ 200 ರೂ. ಹಂಚಿಕೆ ಆರೋಪದಲ್ಲಿ ಸಂಸದ ತುಕಾರಾಂ ಮನೆ ಮೇಲೆ ದಾಳಿ ನಡೆದಿದೆ.
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಮತದಾರರಿಗೆ 200 ರೂ.ನಂತೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ. ಶಾಸಕರಾದ ನಾರಾ ಭರತ್ ರೆಡ್ಡಿ, ಗಣೇಶ್ (ಕಂಪ್ಲಿ ಕ್ಷೇತ್ರ), ಶ್ರೀನಿವಾಸ್ ಅವರ ಮನೆ ಮೇಲೂ ಇ.ಡಿ ದಾಳಿ ಮಾಡಿದೆ.
ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ಶೋಧ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.