ಮಧ್ಯಪ್ರದೇಶ : ವೇಗವಾಗಿ ಬಂದ ವ್ಯಾನ್ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಬಾವಿಗೆ ಉರುಳಿ ಬಿದ್ದಿದೆ. ಈ ಅವಘಡದಲ್ಲಿ ಬೈಕ್ ಸವಾರ ಸೇರಿದಂತೆ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಭಾನುವಾರ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,. ವ್ಯಾನ್ನಲ್ಲಿ 13 ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ನಾಲ್ವರನ್ನು ರಕ್ಷಿಸಲಾಗಿದೆ. ಆದರೆ ವ್ಯಾನ್ನಲ್ಲಿನ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆ ; ತುರ್ತು ಪರಿಸ್ಥಿತಿ ಘೋಷಣೆ
ಇನ್ನೂ ಇವರ ರಕ್ಷಣೆಗಾಗಿ ಬಾವಿಗೆ ಇಳಿದ ಮನೋಹರ್ ಎಂದು ಗುರುತಿಸಲಾದ ಗ್ರಾಮಸ್ಥರು ಸಹ ಸಾವನ್ನಪ್ಪಿದ್ದಾರೆ. ಎನ್ಡಿಆರ್ಎಫ್ ಮತ್ತು ಇತರ ಘಟಕಗಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಸ್ಥಳಕ್ಕೆ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಭೇಟಿ ನೀಡಿ, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.