ಬೆಂಗಳೂರು: ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಬೆಂಗಳೂರಿಗೆ ಇಂದು ಮಳೆರಾಯನ ಆಗಮನವಾಗಿದೆ. ನಗರದ ಹಲವಾರು ಪ್ರದೇಶಗಳಲ್ಲಿ ಗಾಳಿ ಮಳೆ ಸುರಿದು ವಾತಾವರಣ ತಂಪಾಗಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ ಮುಂತಾದ ಪ್ರದೇಶಗಳಲ್ಲಿ ಜೋರಾಗಿ ಮಳೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ಟ್ರಾಫಿಕ್ ಜಾಮ್ನಿಂದ ವಾಹನ ಸವಾರರು ಪರದಾಡುವಂತಾಯಿತು. ಮಳೆಯಿಂದ ಬೀದಿ ಬದಿ ವ್ಯಾಪಾರಿಗಳೂ ಕೂಡ ಪರದಾಡಿದರು. ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಗರದಾದ್ಯಂತ ಮೋಡ ಕವಿದ ವಾತಾವರಣವಿದ್ದು, ಔಟರ್ ರಿಂಗ್ ರೋಡ್ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಎಂ.ಜಿ ರೋಡ್, ಚಿನ್ನಸ್ವಾಮಿ ಸ್ಟೇಡಿಯಂ, ವಿಧಾನಸೌಧ, ಕೆ.ಆರ್ ಸರ್ಕಲ್, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್ ಸೇರಿದಂತೆ ಹಲವು ಕಡೆ ಮಳೆ ಆರಂಭವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.