ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ದಿಢೀರ್ ಮಳೆಯಾಗಿದೆ. ಬೇಸಿಗೆ ಬಿರು ಬಿಸಿಲಿನಿಂದ ಬಳಲಿದ್ದ ಬೆಂಗಳೂರಿಗರಿಗೆ ವರುಣನ ಸಿಂಚನವಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪನೆಯ ವಾತಾವರಣ ಸಿಕ್ಕಂತಾಗಿದೆ. ಕಾರ್ಪೋರೇಷನ್, ಶಾಂತಿನಗರ, ಕೆ.ಆರ್.ಮಾರ್ಕೆಟ್, ಸಂಪಂಗಿರಾಮನಗರ, ಅವೆನ್ಯೂ ರೋಡ್ ಸೇರಿದಂತೆ ಕೆಲವೆಢ ಮಳೆ ಸುರಿಯುತ್ತಿದೆ.
kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ
ಮುಂದಿನ ಮೂರು ಗಂಟೆಗಳ ರಾಜ್ಯಾಧ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈಗಾಗಲೇ ಅನೇಕ ಕಡೆಗಳಲ್ಲಿ ಮಳೆ ಆರಂಭಗೊಂಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಯಲ್ಲಿ ಮಳೆ ಸಾಧ್ಯತೆ. ಗುಡುಗು, ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನೂ ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ಚಿಕ್ಕಮಗಳೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.