ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ ಸಂಜೆ ಹಾಗೂ ರಾತ್ರಿ ಸುರಿದ ಮಳೆಗೆ ಸಿಟಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ. ಚಾಮರಾಜಪೇಟೆ, ಜಯನಗರ, ವಿಜಯನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಅಷ್ಟೇ ಅಲ್ಲದೆ, ರಾತ್ರಿಯಿಡೀ ಮಳೆ ಸುರಿದಿರುವುದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ.
ಭಾರಿ ಮಳೆಗೆ ಬೆಂಗಳೂರು ಹೈರಾಣು: ನೀರಲ್ಲಿ ಮುಳುಗಿದ ಸಿಸಿಬಿ ಕಚೇರಿ.. ಕೆರೆಯಂತಾದ ಆವರಣ!
ಧಾರಾಕಾರ ಮಳೆಗೆ ಬೆಂಗಳೂರು ತತ್ತರವಾಗಿದ್ದು, ಮೆಜೆಸ್ಟಿಕ್, ಕೆ ಆರ್ ಮಾರುಕಟ್ಟೆ, ಜಯನಗರ, ವಿಜಯನಗರ, ಚಂದ್ರಲೇಔಟ್, ರಾಜಾಜಿನಗರ, ಆರ್ ಟಿ ನಗರ, ಹೆಬ್ಬಾಳ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಯಶವಂತಪುರ, ಪೀಣ್ಯ, ಬೊಮ್ಮನ ಹಳ್ಳಿ, ನಾಯಂಡಹಳ್ಳಿ, ಕುಮಾರಸ್ವಾಮಿ ಲೇಔಟ್, ಆರ್ ಆರ್ ನಗರ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.
ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ನಗರದ ಹೊರ ಹೋಗುವ ಮತ್ತು ಒಳ ಬರುವ ಕಡೆಗೆ ನಿಧಾನಗತಿಯ ಸಂಚಾರ ಇದೆ. ವಿದ್ಯಾಶಿಲ್ಪ ರೈಲ್ವೆ ಅಂಡರ್ಪಾಸ್ ನಿಂದ ಏರ್ಪೋರ್ಟ್ ಕಡೆಗೂ ಸಂಚಾರ ನಿಧಾನ ಇದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಇಷ್ಟೇ ಅಲ್ಲದೆ, ಇನ್ನೂ ಅನೇಕ ಪ್ರದೇಶಗಳಲ್ಲಿ ನಿಧಾನಗತಿಯ ಸಂಚಾರ ಇರುವುದಾಗಿ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಆ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಎಲ್ಲೆಲ್ಲಿ ಸಂಚಾರಕ್ಕೆ ಅಡಚಣೆ, ನಿಧಾನಗತಿಯ ಸಂಚಾರ?
ಹೆಚ್ಎಸ್ಆರ್ ಲೇಔಟ್ ಡಿಪೋ ದಿಂದ14 ನೇ ಮುಖ್ಯ ರಸ್ತೆಯ ಕಡೆಗೆ.
ಕನಕಪುರ ಮುಖ್ಯ ರಸ್ತೆ (ನೈಸ್ ರಸ್ತೆ) ಯಿಂದ ಕೋಣನಕುಂಟೆ ಕಡೆಗೆ.
ಶಿರಸಿ ವೃತ್ತದ ಬಳಿ ಮರ ಬಿದ್ದಿರುವುದರಿಂದ ಉಮಾ ಥಿಯೇಟರ್ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ.
ಪ್ರಸನ್ನ ಚಿತ್ರ ಮಂದಿರದಿಂದ ಬಸವ ಮಂಟಪ ಸಿಗ್ನಲ್ ಕಡೆಗೆ.
ಸೋನಿ ವರ್ಲ್ಡ್ ಸಿಗ್ನಲ್ನಿಂದ ಮಹಾರಾಜ ಸಿಗ್ನಲ್ ಕಡೆಗೆ.
ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಬೆಳ್ಳಂದೂರು ಕಡೆಗೆ.
ಲೌರಿ ರೈಲ್ವೆ ಅಂಡರ್ಪಾಸ್ ನಿಂದ ಮಹದೇವಪುರ ಕಡೆಗೆ.
ಬೇಲಿಮಠ ಜಂಕ್ಷನ್ ನಿಂದ ಬಿನ್ನಿಮಿಲ್ ಕಡೆಗೆ.
ಆದರ್ಶ ಜಂಕ್ಷನ್ ನಿಂದ ರಾಮಯ್ಯ ಜಂಕ್ಷನ್ ಕಡೆಗೆ.
ಸಿಲ್ಕ್ ಬೋರ್ಡ್ ನಿಂದ ಅಗರ ಸಿಗ್ನಲ್ ಕಡೆಗೆ.
ಕೆನ್ಸಿಂಗ್ಟನ್ ನಿಂದ ಗುರುದ್ವಾರ ಕಡೆಗೆ.
ಆಟೋ ಮಾರ್ಟ್ ನಿಂದ ಅಗರ ಕಡೆಗೆ.
ಶಾಹಿ ಗಾರ್ಮೆಂಟ್ಸ್, ಬನ್ನೇರುಘಟ್ಟ ರಸ್ತೆ ಯಿಂದ ಹುಳಿಮಾವು ಗೇಟ್ ಕಡೆಗೆ.
ರಾಷ್ಟ್ರೋತ್ಥಾನ ಸ್ಕೂಲ್ ಜಂಕ್ಷನ್ ನಿಂದ ಕ್ಲೌಡ್-9 ಆಸ್ಪತ್ರೆ,ಥಣಿಸಂದ್ರ ರಸ್ತೆ ಕಡೆಗೆ.