ತಿರುಚ್ಚಿ: ತಮಿಳುನಾಡಿನ ತಿರುಚ್ಚಿಯಲ್ಲಿ ಬಸವ ಜಯಂತಿ ಹಾಗೂ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿಗಳಾದ ಹೆಚ್.ಎಂ ರೇಣುಕ ಪ್ರಸನ್ನ ಅವರು ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತರಾದ ಕಣ್ಣಪ್ಪ ತಂಬಿರಾರ್ ಅವರನ್ನು ವೀರಶೈವ ಮಹಾಸಭಾ ವತಿಯಿಂದ ಸನ್ಮಾನಿಸಲಾಯಿತು.
ದಿಂಡಿ ಓಣಂನಾ ಮಹಿಲಂ ಮಠದ ಬ್ರಹ್ಮಪುರ ಆದಿನಂ ಸ್ವಾಮೀಜಿ ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಅಭಿಲಭಾರತ ಮಹಾಸಭಾದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರಾದ ಎಸ್ ನಾಗರತಿನಂ,
ಪ್ರಧಾನ ಕಾರ್ಯದರ್ಶಿಗಳಾದ ಡಿ.ಎಲ್ ಬಾಲಾಜಿ ಮತ್ತು ರಾಷ್ಟ್ರೀಯ ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗದ ಅಧ್ಯಕ್ಷರಾದ ಉಮೇಶ್ ಹೆಚ್ ಪಾಟೀಲ್ ಭಾಗವಹಿಸಿದ್ದರು