ಬೆಂಗಳೂರು:- ಸ್ಯಾಂಡಲ್ವುಡ್ನ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಕನ್ನಡ ಚಿತ್ರರಂಗ ಕಂಡ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ತಮ್ಮ 76ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.
ಲಿವರ್ ಸಿರೋಸಿಸ್ ನ ಕೊನೆಯ ಹಂತದಲ್ಲಿ ಕಂಡುಬರುವ ಲಕ್ಷಣಗಳು ಹೀಗಿರತ್ತೆ!
ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ನಟ ಬ್ಯಾಂಕ್ ಜನಾರ್ಧನ್ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಬ್ಯಾಂಕ್ ಜನಾರ್ಧನ್ ಪುತ್ರ ಗುರುಪ್ರಸಾದ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.