ಧಾರವಾಡ : ನಟ ಕಮಲ್ ಹಾಸನ್ ಕನ್ನಡ ಭಾಷೆಯ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ ಹಾಗೂ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕನ್ನಡದ ಕುರಿತು ಹಗುರವಾಗಿ ಮಾತನಾಡಿ ಕ್ಷಮೆ ಕೇಳದೇ ಮೊಂಡುತನ ತೋರುವ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳದಿದ್ದರೆ ಮುಂದೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಹಿರಿಯ ಸಾಹಿತಿಗಳು, ಚಿಂತಕರು, ಭಾಷಾ ತಜ್ಞರು ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ ಎಲ್ಲಾ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿ, ನಟ ಕಮಲ್ ಹಾಸನ್ ವಿರುದ್ಧ ವಾಗ್ದಾಳಿ ನಡೆಸಿದರು.
ನಿಮ್ಮ ಲ್ಯಾಪ್ ಟಾಪ್ ನಲ್ಲಿ ಬೇಗ ಚಾರ್ಜ್ ಕಡಿಮೆ ಆಗುತ್ತಾ!? ಹಾಗಿದ್ರೆ ಈ ರೀತಿ ಮಾಡಿ!
ಪ್ರತಿಭಟನೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಹಿರಿಯ ಸಾಹಿತಿ ವೀರಣ್ಣ ರಾಜೂರ, ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಡಾ. ಆನಂದ ಪಾಂಡುರಂಗಿ, ಶಂಕರ ಹಲಗತ್ತಿ, ಡಿ.ಎಂ ಹಿರೇಮಠ, ಹೇಮಾ ಪಟ್ಟಣಶೆಟ್ಟಿ, ಸತೀಶ ತುರಮರಿ, ಪಿ.ಎಚ್ ನೀರಲಕೇರಿ ಸೇರಿದಂತೆ ಇತರರು ಇದ್ದರು.