ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾಕ ದಾಳಿಯನ್ನು ಕ್ರಿಕೆಟಿಗರು ತೀವ್ರವಾಗಿ ಖಂಡಿಸಿದ್ದಾರೆ. ಈ ದಾಳಿಯನ್ನು ಖಂಡಿಸಿ ಟೀಮ್ ಇಂಡಿಯಾ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಘೋರ ದಾಳಿಯಿಂದ ತೀವ್ರ ದುಃಖವಾಗಿದೆ.
ಮೃತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪಗಳು. ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ ಶಾಂತಿ ಮತ್ತು ಶಕ್ತಿ ನೀಡಲಿ ಮತ್ತು ಈ ಕ್ರೂರ ಕೃತ್ಯಕ್ಕೆ ನ್ಯಾಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
Helmet Tips: ಹೆಲ್ಮೆಟ್ ಧರಿಸದಿದ್ದರೆ ದಂಡ: ಖರೀದಿಸುವಾಗ ಈ ಸಲಹೆಗಳು ಕಡ್ಡಾಯ!
ಜಮ್ಮು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಪ್ರವಾಸಿ ತಾಣ ಬೈಸರನ್‌ನಲ್ಲಿ ಉಗ್ರರು ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಸುಮಾರು 27 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದ ಒಬ್ಬರು ಸಹ ನಿನ್ನೆಯ ದಾಳಿಯಲ್ಲಿ ಮೃತಪಟ್ಟಿದ್ದಾರೆ.
ಇಡೀ ದೇಶವೇ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದೆ. ಪಾಕ್ ಕೃಪಾಪೋಷಿತ ಉಗ್ರರ ದಾಳಿ ಇದೆಂದು ಆರಂಭಿಕ ತನಿಖೆಯ ವರದಿಗಳು ಹೇಳುತ್ತಿವೆ. ದಾಳಿಯ ಜವಾಬ್ದಾರಿಯನ್ನು ಟಿಆರ್ಎಫ್ (ದಿ ರೆಸಿಟೆಂಟ್ ಫ್ರಂಟ್) ಹೊತ್ತುಕೊಂಡಿದೆ. ಈಗಾಗಲೇ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರದ ಇನ್ನೂ ಕೆಲವು ಪ್ರಮುಖ ಸಚಿವರು ಸಭೆ ನಡೆಸಿದ್ದು ಸರ್ಕಾರದ ಮುಂದಿನ ಹೆಜ್ಜೆ ಏನಾಗಿರಲಿದೆ ಎಂಬುದು ಕಾದು ನೋಡಬೇಕಿದೆ.