ಮಳೆ ಗಾಳಿಗೆ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ. ಮಳೆ-ಗಾಳಿಗೆ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು, ಓರ್ವನಿಗೆ ಗಾಯವಾಗಿದೆ.
ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಧಾರವಾಡ ಪ್ಲಾಟ್ ನಿವಾಸಿ ದಾವೂದ್ ಸವಣೂರು (52) ಹಾಗೂ ಹಳೇ ಹುಬ್ಬಳ್ಳಿ ನೂರಾಣಿ ಪ್ಲಾಟ್ ನಿವಾಸಿ ರಫಿಕಸಾಬ್ ಚನ್ನಾಪುರ (50) ಮೃತ ವ್ಯಕ್ತಿಗಳು. ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಮಹಾಂತೇಶ ಚವರಗುಡ್ಡ ಎಂಬುವವರಿಗೆ ಗಾಯವಾಗಿದ್ದು,
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
ಗಾಯಗೊಂಡ ವ್ಯಕ್ತಿಯನ್ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರ್ಮಾಣ ಆಗುತ್ತಿರುವ ಕಟ್ಟಡದ ಗಾರೆ ಕೆಲಸಕ್ಕೆ ತೆರಳಿದ್ದ ಕೂಲಿ ಕಾರ್ಮಿಕರು, ಮಧ್ಯಾಹ್ನ ಮಳೆ ಗಾಳಿ ಜೋರಾಗಿ ಬೀಸಿದ್ದರಿಂದ ಗೋಡೆಯ ಬಳಿ ನಿಂತಿದ್ದರು.ಗಾಳಿ ರಭಸಕ್ಕೆ ಗೋಡೆ ಕುಸಿದು ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.