ವಿಜಯಪುರ : ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಹಿನ್ನೆಲೆ ವಿಜಯಪುರದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. .
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರ ಸಂಭ್ರಮಾಚರಣೆ ನಡೆಸಿದ್ದು, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಅಕ್ಟೋಬರ್ ತಿಂಗಳಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಅಹೋರಾತ್ರಿ ಧರಣಿ ನಡೆಸಿದ್ದರು. ಇದೀಗ ವಕ್ಫ್ ಕಾಯ್ದೆ ತಿದ್ದುಪಡಿ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರಿಗೆ ಅಭಿನಂದನೆ ಸಲ್ಲಿಸಿದರು. ರೈತರ ಪರ ವಕ್ಫ್ ಕಾಯ್ದೆ ತಿದ್ದುಪಡಿ ಮಾಡಿದ್ದಾರೆ ಎಂದು ಸಂಭ್ರಮಿಸಿದರು.