ಬೆಂಗಳೂರು:- ಆಪರೇಷನ್ ಸಿಂದೂರ್ ನಂತರ ಪಾಕಿಸ್ತಾನವು ಭಾರತದ 15 ನಗರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಮಾಡಲು ಮುಂದಾಗಿದ್ದು, ಅದನ್ನು ಭಾರತದ ವಾಯು ರಕ್ಷಣಾ ವ್ಯವಸ್ಥೆ ತಡೆದಿದೆ. ಇದರ ಬೆನ್ನಲ್ಲೇ ಭಾರತೀಯ ಸೇನೆ ಕೂಡ ಪಾಕಿಸ್ತಾನದ ಅದೇ ತೀವ್ರತೆಯಲ್ಲಿ ಲಾಹೋರ್, ಕರಾಚಿಗಳ ಮೇಲೆ ದಾಳಿ ನಡೆದಿತ್ತು. ನಂತರ ಮತ್ತೆ ಪಾಕಿಸ್ತಾನ ಜಮ್ಮು ವಾಯುನೆಲೆಯ ಮೇಲೆ ದಾಳಿಗೆ ಯತ್ನಿಸಿದ್ದಕ್ಕೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಮಿಂಚಿನ ದಾಳಿ ನಡೆಸಿವೆ.
ಆಪರೇಷನ್ ಸಿಂದೂರ್ ನಂತರದ ಬೆಳವಣಿಗೆಗಳಿಂದ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿರುವ ಹೆಚ್ಎಎಎಲ್ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೆಚ್ಎಎಎಲ್ನ ಎಲ್ಲ ಸಿಬ್ಬಂದಿಯ ರಜೆ ರದ್ದುಗೊಳಿಸಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧರಿರುವಂತೆ ಸೂಚಿಸಲಾಗಿದೆ. ಯುದ್ಧ ವಿಮಾನಗಳ ನಿರ್ವಹಣೆಯ ಕಾರಣ ಕಡ್ಡಾಯ ಹಾಜರಿರುವಂತೆ ಸಿಬ್ಬಂದಿಗೆ, ತಂತ್ರಜ್ಞರಿಗೆ ಸೂಚನೆ ನೀಡಲಾಗಿದೆ. ತುರ್ತು ಪರಿಸ್ಥಿತಿ ಎದುರಿಸಲು ತಯಾರಿ ನಡೆಸುವಂತೆ ನಿರ್ದೇಶನ ನೀಡಿದೆ.