ಬೆಂಗಳೂರು:- ಕಳೆದ ದಿನಗಳಿಂದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಹೆಚ್ಚು DCM ಡಿಕೆ ಶಿವಕುಮಾರ್ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಡಿಸಿಎಂ ಶಿವಕುಮಾರ್ ಶೀಘ್ರದಲ್ಲೇ ಮುಖ್ಯಮಂತ್ರಿ ಆಗುತ್ತಾರೆ ಎಂಬ ಹೇಳಿಕೆಯನ್ನು ಮಾಧ್ಯಮದ ಮೂಲಕ ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದರು.
ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣ: ಸುರಳ್ಕರ್ ವಿಕಾಸ್ ಕಿಶೋರ್
ಈ ಹೇಳಿಕೆಯೇ ಇದೀಗ ಇಕ್ಬಾಲ್ ಹುಸೇನ್ ಗೆ ಸಂಕಷ್ಟ ಎದುರಾಗಿದೆ. ಡಿಕೆ ಶಿವಕುಮಾರ್ ಸಿಎಂ ಆಗುವ ಕಾಲ ಹತ್ತಿರ ಇದೆ. 100 ಶಾಸಕರ ಸಂಖ್ಯಾಬಲವೂ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದ ರಾಮನಗರದ ಶಾಸಕ ಇಕ್ಬಾಲ್ ಹುಸೇನ್‌ಗೆ ನೋಟಿಸ್ ಜಾರಿಯಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೋಟಿಸ್ ಜಾರಿ ಮಾಡಿ 1 ವಾರದ ಒಳಗಡೆ ಈ ಹೇಳಿಕೆಯ ಬಗ್ಗೆ ಸಮಜಾಯಿಷಿ ನೀಡುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಬದಲಾವಣೆ ವಿಷಯದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿರುತ್ತೀರಿ.
‘ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಈ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ತಾವುಗಳು ಈ ನೋಟಿಸ್ ತಲುಪಿದ ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಲು ಸೂಚಿಸಲಾಗಿದೆ.