ನೀರಿನ ಬಳಕೆ ,ಉಳಿಕೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮಾರ್ಚ್ 22ರಂದು ವಿಶ್ವ ಜಲ ದಿನವನ್ನು ಭಾರತ ಸೇರಿದಂತೆ ವಿಶ್ವದಾದ್ಯಂತ ಆಚರಿಸಲಾಗುತ್ತದೆ. 21 ನೇ ಶತಮಾನದಲ್ಲಿ ನಾವು ಎದುರಿಸುತ್ತಿರುವ ನೀರಿನ ಸವಾಲುಗಳಿಗೆ ಪ್ರಕೃತಿ ಆಧಾರಿತ ಪರಿಹಾರಗಳನ್ನು ಅನ್ವೇಷಿಸುವುದಾಗಿದೆ. ಹಾನಿಗೊಳಗಾದ ಪರಿಸರ ವ್ಯವಸ್ಥೆಯು ಮಾನವ ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ ಮತ್ತು ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಪ್ರಕೃತಿಯನ್ನು ಉಳಿಸಿ ನೀರನ್ನು ಸಂರಕ್ಷಿಸಬೇಕಾಗಿದೆ.
ಈ Laptop ಗೆ ಚಾರ್ಜಿಂಗ್ ಅಗತ್ಯವಿಲ್ಲ..! ವಿದ್ಯುತ್ ಇಲ್ಲದೆ ಬಳಸಬಹುದು – ಹೇಗೆ ಗೊತ್ತಾ..?
ವಿಶ್ವ ಜಲ ದಿನದ ಇತಿಹಾಸ:
ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನದ ಇತಿಹಾಸದ ಬಗ್ಗೆ ನೋಡುವುದಾದರೆ 1992ರಲ್ಲಿ ರಿಯೊ ಡಿ ಜನೈರೋದಲ್ಲಿ ನಡೆದ ವಿಶ್ವ ಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿಯ ಸಮ್ಮೇಳನದಲ್ಲಿ ಅಂತಾರಾಷ್ಟ್ರೀಯ ಸಿಹಿ ನೀರಿನ ದಿನವನ್ನು ಆಚರಿಸುವ ಬಗ್ಗೆ ಶಿಫಾರಸ್ಸು ಮಾಡಲಾಯಿತು. ಆದಾದ ಬಳಿಕ ಡಿಸೆಂಬರ್ 22ರಂದು ವಿಶ್ವಸಂಸ್ಥೆ ಸಂಸತ್ತಿನಲ್ಲಿ ಈ ನಿರ್ಣಯಕ್ಕೆ ಒಪ್ಪಿಗೆ ಸಿಕ್ಕಿತು. 1993 ಮಾರ್ಚ್ 22ರಂದು ಮೊದಲ ವಿಶ್ವ ಜಲ ದಿನವೆಂದು ಘೋಷಿಸಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಜಲದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ವಿಶ್ವ ಜಲ ದಿನದ ಮಹತ್ವ:
ವಿಶ್ವ ಜಲ ದಿನವನ್ನು ಆಚರಿಸುವುದರ ಹಿಂದಿನ ಪ್ರಮುಖ ಉದ್ದೇಶವೇನೆಂದರೆ ಸಿಹಿನೀರಿನ ಮೂಲಗಳನ್ನು ಕಾಪಾಡುವ ಮೂಲಕ ಮುಂದಿನ ಪೀಳಿಗೆಯವರಿಗೆ ನೀರನ್ನು ಒದಗಿಸುವುದು. ಈ ದಿನದಂದು ಸಿಹಿ ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗಾಗಿ ಆಚರಿಸಲಾಗುತ್ತದೆ. ಹೀಗಾಗಿ ನೀರನ್ನು ಮಿತವಾಗಿ ಬಳಸಿ ನೀರಿನ ಮೂಲಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ. ಈ ದಿನದಂದು ವಿವಿಧ ಸಂಸ್ಥೆಗಳು, ಎನ್ಜಿಒಗಳು ಹಾಗೂ ಖಾಸಗಿ ಸಂಸ್ಥೆಗಳು ನೀರಿನ ಸಂರಕ್ಷಣೆಯ ಬಗ್ಗೆ ಮಾಹಿತಿ ಕಾರ್ಯಾಗಾರಗಳು ಹಾಗೂ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತದೆ.