ಬೆಂಗಳೂರು: ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿ.ಆರ್.ಪಾಟೀಲ್ ಅವರು ಮನೆಗಳನ್ನು ಕೊಡುವ ಸಮಯದಲ್ಲಿ ದುಡ್ಡು ಕೊಡದೇ, ಲಂಚ ಕೊಡದೇ ಏನು ಕೆಲಸ ಆಗುವುದಿಲ್ಲ ಎಂದು ಗುರುತರದ ಆರೋಪ ಮಾಡಿದ್ದಾರೆ.
ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ?
ಸಿಎಂ ಸಿದ್ದರಾಮಯ್ಯ ಕರೆದರೆ ವಾಸ್ತವದ ಸ್ಥಿತಿ ಹೇಳುವುದಾಗಿ ಹೇಳಿದ್ದಾರೆ. ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ ಎಂದು ಅನುಮಾನ ವ್ಯಕ್ತಪಡಿಸಿದರು. ಕೇವಲ ರಾಜು ಕಾಗೆ ಮಾತ್ರವಲ್ಲ, ಹೀಗೆ ಹತ್ತಾರು ಜನರು ಈ ರೀತಿ ಹೇಳುತ್ತಿದ್ದಾರೆ. ಒಬ್ಬೊಬ್ಬರೇ ಬಾಯಿ ಬಿಡುತ್ತಾರೆ. ನೀವೇ ಕಾದು ನೋಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.