ಇಸ್ಲಾಮಾಬಾದ್: ಪೆಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ಹೆ ಸರಿನಲ್ಲಿ ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ದಾಳಿ ನಡೆಸಿತ್ತು. 100ಕ್ಕೂ ಅಧಿಕ ಉಗ್ರರನ್ನು ಹತ್ಯೆಗೈದಿತ್ತು. ಆದರೆ ಪಾಕಿಸ್ತಾನ ಇದಕ್ಕೆ ಪ್ರತಿಯಾಗಿ ಮತ್ತಷ್ಟು ಅಮಾಯಕರನ್ನು ಹತ್ಯೆಗೈದಿತ್ತು. ಭಾರತದ ಮೇಲೆ ನಿರಂತರ ದಾಳಿ ನಡೆಸುತ್ತಲೇ ಇದೆ. ಭಾರತವು ಅದಕ್ಕೆ ತಕ್ಕ ಉತ್ತರ ಕೊಟ್ಟಿದೆ. ಭಾನುವಾರ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನ ವಿರಾಮ ಘೋಷಿಸಿವೆ.
Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ
ಇದೀಗ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿರುವುದು ಹೌದು ಎಂದು ಖುದ್ದಾಗಿ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನ ವಾಯುಪಡೆಯ ವಾಯು ವೈಸ್ ಮಾರ್ಷಲ್ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶಕ (ಡಿಜಿಪಿಆರ್) ಔರಂಗಜೇಬ್ ಅಹ್ಮದ್ ಪತ್ರಿಕಾಗೋಷ್ಠಿಯಲ್ಲಿ, ಪುಲ್ವಾಮಾ ದಾಳಿಯನ್ನು ‘ಯುದ್ಧತಂತ್ರದ ಪ್ರತಿಭೆ’ಗೆ ಒಂದು ಉದಾಹರಣೆ ಎಂದು ಹೇಳಿದ್ದಾರೆ.
ಈ ಹೇಳಿಕೆಯು ಪುಲ್ವಾಮಾ ದಾಳಿಯಲ್ಲಿ ಮಾತ್ರವಲ್ಲದೆ ಇತ್ತೀಚಿನ ಪಹಲ್ಗಾಮ್ ದಾಳಿಯಲ್ಲೂ ಪಾಕಿಸ್ತಾನದ ಪಾತ್ರದ ಬಗ್ಗೆ ಅನುಮಾನಗಳನ್ನು ದೃಢಪಡಿಸುತ್ತಿದೆ. ಔರಂಗಜೇಬ್ ಅಹ್ಮದ್ ಅವರ ಈ ಹೇಳಿಕೆಯು ಪಾಕಿಸ್ತಾನದ ವರ್ಷಗಳ ಹಳೆಯ ಕಥೆಯನ್ನು ತಲೆಕೆಳಗೆ ಮಾಡಿದಂತಾಗಿದೆ. ಪುಲ್ವಾಮಾ ಅಥವಾ ಯಾವುದೇ ಭಯೋತ್ಪಾದಕ ಚಟುವಟಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಪದೇ ಪದೇ ಹೇಳುತ್ತಿದೆ.
ಪುಲ್ವಾಮಾ ಭಯೋತ್ಪಾದಕ ದಾಳಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಏರ್ ವೈಸ್ ಮಾರ್ಷಲ್ ಔರಂಗಜೇಬ್ ಅಹ್ಮದ್, ನಮ್ಮ ಯುದ್ಧತಂತ್ರದ ಪ್ರತಿಭೆಯ ಮೂಲಕ ನಾವು ಇದನ್ನು ಭಾರತಕ್ಕೆ ಹೇಳಲು ಪ್ರಯತ್ನಿಸಿದ್ದೇವೆ ಎಂದು ಹೇಳಿದರು.