ವಾಷಿಂಗ್ಟನ್:– ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದ ಜತೆ ನಾವಿದ್ದೇವೆ ಎಂದು ಅಮೆರಿಕ ತಿಳಿಸಿದೆ.
ಯತ್ನಾಳ್ ಸವಾಲು ಸ್ವೀಕರಿಸಿದ ಸಚಿವ: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಶಿವಾನಂದ ಪಾಟೀಲ್!
ಪಹಲ್ಗಾಮ್ ದಾಳಿಯ ನಂತರ ಅಮೆರಿಕ ವಿದೇಶಾಂಗ ಇಲಾಖೆಯಿಂದ ಈ ಹೇಳಿಕೆ ಬಂದಿದೆ.ಭಾರತ ಮತ್ತು ಅಮೆರಿಕ ಒಟ್ಟಾಗಿ ಕೆಲಸ ಮಾಡಿ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕೆಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಮನವಿ ಮಾಡಿದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು.
ಲಷ್ಕರ್ ಎ ತೊಯ್ಬಾದ ಟಿಆರ್ಎಫ್ ಹೊಣೆ ಹೊತ್ತುಕೊಂಡಿತ್ತು. ಬಳಿಕ ಉಲ್ಟಾ ಹೊಡೆದಿತ್ತು. ಅದೇನೇ ಇರಲಿ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿರುವುದು ದೃಢಪಟ್ಟಿದೆ. ಹಾಗೆಯೇ ಭಾರತವು ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ. ಜತೆಗೆ ಉಗ್ರರನ್ನು ಹುಡುಕಿ ಕೊಲ್ಲುತ್ತೇವೆ, ಅವರು ಕನಸಲ್ಲೂ ಎಣಿಸಿರದ ಶಿಕ್ಷೆ ಅವರಿಗಾಗಿ ಕಾದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.,
ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದರು.
ಈ ಘಟನೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಿದೆ. ಈ ಘಟನೆಗೆ ಪಾಕಿಸ್ತಾನವೇ ಕಾರಣ ಎಂದು ಭಾರತ ಆರೋಪಿಸಿದೆ ಮತ್ತು ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಬುಧವಾರ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು.
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಅಮೆರಿಕ ಭಾರತದ ಜೊತೆ ನಿಲ್ಲುತ್ತದೆ ಮತ್ತು ಪ್ರಧಾನಿ ಮೋದಿ ಅವರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ‘ನಮ್ಮ ಸರ್ಕಾರ ಭಾರತ ಮತ್ತು ಪಾಕಿಸ್ತಾನದೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ’ ಎಂದು ಬ್ರೂಸ್ ಹೇಳಿದರು.