ವಿಜಯಪುರ:- ಇಲ್ಲಿನ ಆಲಕುಂಟೆ ನಗರದಲ್ಲಿ ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.
ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ನಿಮ್ಮ ಮನೆಯಲ್ಲೂ 60 ವರ್ಷ ಮೇಲ್ಪಟ್ಟವರು ಇದ್ರೆ, ಈ ಸುದ್ದಿ ನೋಡಿ!
ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ. ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ ಬಿಎಲ್ಡಿಇ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅಜೀತ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಘಟನೆಗೆ ಕಾರಣ ಪತ್ನಿ ತೇಜುಗೆ ಬುದ್ದಿಮಾತು ಹೇಳಿದ್ದೇ ಅಜೀತ್ ಪ್ರಾಣಕ್ಕೆ ಸಂಚಕಾರ ತಂದಿದೆ ಎನ್ನಲಾಗಿದೆ. ಸದಾಕಾಲ ಮೊಬೈಲ್ನಲ್ಲಿ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದ ತೇಜುಗೆ ಚಾಟ್ ಮಾಡಬೇಡ ಎಂದು ಬುದ್ದಿ ಮಾತು ಹೇಳಿದ್ದಕ್ಕೆ ಪತಿ ಅಜೀತ್ ಮೇಲೆ ಸಿಟ್ಟಾಗಿ ಇಂತ ದುಸ್ಸಾಹಸ ಮಾಡಿದ್ದಾಳೆ.