ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಆರ್ ಸಿಬಿ ಗೆದ್ದು ಬೀಗಿದೆ.
ಇದರೊಂದಿಗೆ ಆರ್ಸಿಬಿ 2009, 2011 ಮತ್ತು 2016 ರ ನಂತರ ಫೈನಲ್ ತಲುಪಿದೆ. ಮೊಹಾಲಿಯಲ್ಲಿ ನಡೆದ ಐಪಿಎಲ್ 2025 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ XI ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳ ಅಂತರದ ಭರ್ಜರಿ ಜಯ ಗಳಿಸಿದ್ದು, ಫೈನಲ್ಸ್ ಪ್ರವೇಶಿಸಿದೆ.
ಬರೊಬ್ಬರಿ 9 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ತಂಡ ಫೈನಲ್ ಪ್ರವೇಶಿಸಿದ್ದು, ತಂಡದ ಅಭಿಮಾನಿಗಳಲ್ಲಿ ಸಂತಸ ಮೂಡಿದೆ. ಜೂನ್ 1 ರಂದು ನಡೆಯಲಿರುವ ಕ್ವಾಲಿಫೈಯರ್ 2 ರಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಎಲಿಮಿನೇಟರ್ ಪಂದ್ಯದ ವಿಜೇತರೊಂದಿಗೆ ಆಡುವ ಮೂಲಕ ಪಂಜಾಬ್ ಕಿಂಗ್ಸ್ ಫೈನಲ್ಗೆ ಪ್ರವೇಶಿಸಲು ಮತ್ತೊಂದು ಅವಕಾಶವನ್ನು ಪಡೆಯುತ್ತದೆ.
ಕ್ವಾಲಿಫೈಯರ್ -1 ಪಂದ್ಯದಲ್ಲಿ ಆರ್ಸಿಬಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 14.1 ಓವರ್ಗಳಲ್ಲಿ 101 ರನ್ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಫಿಲ್ ಸಾಲ್ಟ್ ಅವರ ಅರ್ಧಶತಕದ ಆಧಾರದ ಮೇಲೆ ಆರ್ಸಿಬಿ 10 ಓವರ್ಗಳಲ್ಲಿ ಎರಡು ವಿಕೆಟ್ಗಳ ನಷ್ಟಕ್ಕೆ 106 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು. 10ನೇ ಓವರ್ನ ಕೊನೆಯ ಎಸೆತದಲ್ಲಿ ನಾಯಕ ರಜತ್ ಪಾಟಿದರ್ ಗೆಲುವಿನ ಸಿಕ್ಸರ್ ಬಾರಿಸುತ್ತಿದ್ದಂತೆ ಇಡೀ ಕ್ರೀಡಾಂಗಣವೇ ಹುಚ್ಚೆದ್ದು ಕುಣಿಯಿತು.