ರಾಮನಗರ: ಲಕ್ಷಾಂತರ ಜನರು ಒಂದೇ ಕಡೆ ಸೇರಿದ್ರೆ ಅನಿರೀಕ್ಷಿತ ಘಟನೆ ನಡೆಯೋದು ಸಹಜ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಈ ದುರಂತಕ್ಕೆ, ಸಾವು-ನೋವಿಗೆ ಎಲ್ಲರೂ ಕಾರಣ. ಎಲ್ಲರೂ ಈ ವಿಚಾರಕ್ಕೆ ತಲೆತಗ್ಗಿಸಬೇಕಿದೆ.
ಇದರಲ್ಲಿ ಸರ್ಕಾರದ ವೈಫಲ್ಯವೂ ಇದೆ. ಪೆಹಲ್ಗಾಮ್ನಲ್ಲಿ ಆದ ದುರಂತ ಕೇಂದ್ರ ಸರ್ಕಾರದ ವೈಫಲ್ಯ ಅಲ್ವಾ? ಕುಮಾರಸ್ವಾಮಿ ಅವ್ರು ಪ್ರಧಾನಮಂತ್ರಿ, ಹೋಂ ಮಿನಿಸ್ಟರ್ ರಾಜೀನಾಮೆ ಕೇಳಿದ್ರಾ? ಹೌದು, ಅದು ಉಗ್ರರ ಅಟ್ಟಹಾಸ, ಅಮಾಯಕರು ಬಲಿಯಾದ್ರು. ಅದರಲ್ಲಿ ನಾವು ರಾಜಕೀಯ ಮಾಡಲಿಲ್ಲ,
ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ವಿಪಕ್ಷಗಳು ಬೆಂಬಲ ಕೊಡಲಿಲ್ವಾ? ಈ ಕಾಲ್ತುಳಿತ ಪ್ರಕರಣ ಕೂಡಾ ಅನಿರೀಕ್ಷಿತ ಅವಘಡ. ಲಕ್ಷಾಂತರ ಜನರು ಒಂದೇ ಕಡೆ ಸೇರಿದ್ರೆ ಅನಿರೀಕ್ಷಿತ ಘಟನೆ ನಡೆಯೋದು ಸಹಜ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಡಾ.ರಾಜಕುಮಾರ್ ಅಂತ್ಯಕ್ರಿಯೆಯಲ್ಲಿ ಅವಘಡ ಆಯ್ತು.
ಕುಮಾರಸ್ವಾಮಿ ಆಗ ರಾಜಿನಾಮೆ ಕೊಟ್ರಾ? ಆಗ ಅವಿತುಕೊಂಡು ಕೂತಿದ್ದರು. ಇದನ್ನ ಕುಮಾರಸ್ವಾಮಿ, ಅಶೋಕ್, ವಿಜಯೇಂದ್ರಗೆ ಕೇಳಿ. ಇದರಲ್ಲಿ ರಾಜಕೀಯ ಬಿಡಿ. ಲೋಪ ಆಗಿರೋದು ನಿಜ. ಅದನ್ನ ಸರಿಪಡಿಸೋದು ಸರ್ಕಾರದ ಜವಾಬ್ದಾರಿ. ಇದರಲ್ಲಿ ರಾಜಕೀಯ ಮಾಡುವವರಿಗೆ ತಿಳಿಹೇಳಬೇಕು ಎಂದರು.