ಹಾಸನ: ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಇಂದು ಮದುವೆ ನಿಶ್ಚಯವಾಗಿತ್ತು.
ಹೊಸ ಬಟ್ಟೆ ಬಣ್ಣ ಬಿಡುತ್ತೆ ಅನ್ನೋ ಭಯ ಇದ್ದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ! ರಿಸಲ್ಟ್ ಪಕ್ಕಾ
ಮುಹೂರ್ತದ ವೇಳೆ ವಧುವಿಗೆ ಕರೆ ಬಂದಿದೆ. ಕರೆ ಬಂದ ಬೆನ್ನಲ್ಲೇ ವಧು ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಈ ಮದುವೆ ಬೇಡ ಎಂದು ಹಠ ಹಿಡಿದಿದ್ದಾಳೆ. ತಕ್ಷಣವೇ ಮದುವೆ ಬೇಡ ಎಂದು ಪಲ್ಲವಿ ಕೊಠಡಿಗೆ ಹೋಗ ಬಾಗಿಲು ಹಾಕಿಕೊಂಡಿದ್ದಾಳೆ.
ವಿಚಾರ ತಿಳಿದು ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸಿದ್ದಾರೆ. ಪೋಷಕರ ಮನವೊಲಿಕೆಗೂ ಕ್ಯಾರೇ ಎನ್ನದ ಯುವತಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾಳೆ. ಯುವತಿ ಹಠವನ್ನು ನೋಡಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ವೇಣುಗೋಪಾಲ ನನಗೂ ಈ ಮದುವೆ ಬೇಡ ಎಂದು ಹೇಳಿದ್ದಾರೆ.
ಪ್ರಿಯಕರನ ಜತೆ ತೆರಳಿದ ವಧು ..!
ಇದರ ನಡುವೆ ಮದುವೆ ನಡೆಯುತ್ತಿದ್ದ ಹಾಸನದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪಕ್ಕೆ ಪೊಲೀಸರೊಡನೆ ಪ್ರಿಯಕರಪ್ರತ್ಯಕ್ಷನಾಗಿದ್ದಾನೆ. ಈ ವೇಳೆ ಪೋಷಕರ ವಿರೊಧದ ನಡುವೆಯೂ ವಧು ಪ್ರಿಯಕರನ ಜತೆ ತೆರಳಿದ್ದಾಳೆ. ಇನ್ನೇನು ತಾಳಿ ಕಟ್ಟುತ್ತಿದಂತೆ ಬಂಧುಗಳ ಉಪಚಾರಕ್ಕೆ ಸಿದ್ದವಾಗಿದ್ದ ಭೋಜನಗಳು ವ್ಯರ್ಥವಾಗಿದ್ದು, ಎರಡು ಕಡೆಯ ಸಂಬಂಧಿಕರಿಗೆ ದಿಕ್ಕುತೋಚಾದಂತಾಗಿದ್ದಾರೆ.