ಕೊಪ್ಪಳ: ಗಂಡನೋರ್ವ ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಬೂದುಗುಂಪಾ ಗ್ರಾಮದಲ್ಲಿ ನಡೆದಿದೆ. ಹೆಂಡತಿಯ ಕತ್ತು ಕೊಯ್ದು ಗಂಡ ಕೊಲೆ ಮಾಡಿದ್ದಾನೆ.
ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!?
ಗಂಗಮ್ಮ ದೊಣ್ಣೆ ಕೊಲೆಯಾದ ದುರ್ದೈವಿ. ಶಿವಪ್ಪ ಹೆಂಡ್ತಿ ಕೊಲೆ ಮಾಡಿ ಪರಾರಿಯಾಗಿರುವ ಗಂಡ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಸ್ಥಳಕ್ಕೆ ಎಸ್ಪಿ ರಾಮ್ ಎಲ್ ಅರಸಿದ್ಧಿ ಬೇಟಿ ನೀಡಿ ಪರಿಶೀಲಿಸಿದ್ದು, ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿದ್ದಾರೆ.