ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ಮೊದಲ ವಾರದಿಂದಲೂ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಬೆಂಗಳೂರು ನಗರ, ಹಿರೆಕೆರೂರು, ಕುಶಾಲನಗರ, ಹಾರಂಗಿ, ಭಾಗಮಂಡಲ, ನಾಪೋಕ್ಲು, ಎಂಎಂ ಹಿಲ್ಸ್, ಶೃಂಗೇರಿ, ಬಂಡೀಪುರ, ಕೆಆರ್ ನಗರ, ಹೆಸರಘಟ್ಟ, ಕಳಸ, ಬೇಗೂರು, ಆಗುಂಬೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಮಳೆಯಾಗಿದೆ, ಇಂದು ಕೂಡ ಮೋಡಕವಿದ ವಾತಾವರಣ ಮುಂದುವರೆಯಲಿದೆ. ಎಚ್ಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.