ಸೋನು ನಿಗಮ್.. ಭಾರತೀಯ ಖ್ಯಾತ ಗಾಯಕ. ಇವರ ಹಾಡುಗಳಿಗೆ ಮನಸೋತವರಿಲ್ಲ. ಅದ್ಬುತ ಗಾಯಕ. ಇವರು ಕನ್ನಡದಲ್ಲೂ ಸಾಕಷ್ಟು ಹಾಡುಗಳನ್ನು ಕೊಟ್ಟಿದ್ದು, ಇವು ಸಾಕಷ್ಟು ಹಿಟ್ ಮಾಡಿದೆ. ಅಲ್ಲದೇ ಕರ್ನಾಟಕದಲ್ಲೂ ಸೋನು ನಿಗಮ್ ಅವರಿಗೆ ಸಾಕಷ್ಟು ಅಭಿಮಾನಿ ಬಳಗವಿದೆ.
IPL 2025: ಗುಜರಾತ್ ಆರ್ಭಟಕ್ಕೆ ಬರ್ನ್ ಆದ ಸನ್ ರೈಸರ್ಸ್: ಮಿಂಚಿದ ಕನ್ನಡಿಗ!
ಆದರೆ ಇದೇ ಸೋನು ನಿಗಮ್ ಇದೀಗ ಕನ್ನಡಿಗರ ಕೆಂಗಣ್ಣಿಗೆ ಗುರಿ ಆಗಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗಿಯಾಗಿದ್ದಾಗ, ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದಾನೆ. ಆಗ ಅದಕ್ಕೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿಕೊಂಡಿದ್ದಾರೆ. ಅಲ್ಲದೇ ಮಾತಾಡುವ ಭರದಲ್ಲಿ ಪಹಲ್ಗಾಮ್ ದಾಳಿ ಹಾಗೂ ಕರ್ನಾಟಕದ ಬಗ್ಗೆ ಮಾತಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆದರೆ ದಿ ಬೆಸ್ಟ್ ಸಾಂಗ್ಸ್ ಹಾಡಿರೋದು ಹೆಚ್ಚು ಕನ್ನಡದಲ್ಲಿ. ಕರ್ನಾಟಕಕ್ಕೆ ಬರುವಾಗ ತುಂಬಾ ಖುಷಿಯಾಗುತ್ತೆ. ತುಂಬಾ ಆಸೆಯಿಂದಲೇ ಇಲ್ಲಿ ಬರ್ತೇನೆ. ಸಾಮಾನ್ಯವಾಗಿ ಕನ್ನಡ ಸಾಂಗ್ಸ್ ಹಾಡಿ ಅಂತ ಕೇಳ್ತಾರೆ. ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ. ಆದರೆ ಆ ಹುಡುಗ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಕೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಸದ್ಯ ಕರ್ನಾಟಕ ಯುವ ಕರ್ನಾಟಕ ವೇದಿಕೆ ಸೋನು ನಿಗಮ್ ಅವರನ್ನು ಕನ್ನಡದಿಂದ ಬ್ಯಾನ್ ಮಾಡುವಂತೆ ಒತ್ತಾಯಿಸಿದೆ.