ಗದಗ : ಗದಗ ಜಿಲ್ಲೆಯ ಹಲವಡೆ ಗಾಳಿ ಸಮೇತ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಬೇರು ಸಮೇತ ವಿದ್ಯುತ್ ತಂತಿಯ ಮೇಲೆ ಮರ ಉರುಳಿ ಬಿದ್ದಿದೆ. ಗದಗನ ಬೆಟಗೇರಿಯ ಶಿವಾಜಿ ನಗರದಲ್ಲಿ ಘಟನೆ ನಡೆದಿದೆ.
ಮರ ವಿದ್ಯತ್ ತಂತಿಯ ಮೇಲೆ ಬಿದ್ದು ವಿದ್ಯುತ್ ಸಂಪರ್ಕ ಕಡಿತೊಂಡಿದೆ. ಗಂಟೆಗಳೇ ಕಳೆದರೂ ಗದಗ-ಬೆಟಗೇರಿ ನಗರಸಭೆ ಅಧಿಕಾರಿಗಳು, ಹೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಬಾರದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸ್ವಲ್ಪ ಹೆಚ್ಚು ಕಡಿಮೆ ಆದ್ರೂ ಅವಘಡ ಸಂಭವಿಸೋ ಸ್ಥಿತಿ ಇದೆ ಎಂದು ನಗರಸಭೆ ಹಾಗೂ ಹೆಸ್ಕಾಂ ಸಿಬ್ಬಂದಿಗಳ ವಿರುದ್ಧ ಅಸಮಾಧಾನವ್ಯಕ್ತಪಡಿಸಿದ್ದಾರೆ.