ತುಮಕೂರು : ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿದ್ದಾಳೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದೆ.
ನೂತನವಾಗಿ ನಿರ್ಮಾಣವಾಗಿರುವ ಚಿಕ್ಕನಹಳ್ಳಿ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಅವೈಜ್ಞಾನಿಕವಾಗಿ ಉಬ್ಬು ಇರುವ ಕಾರಣ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮತ್ತೋರ್ವ ಬೈಕ್ ಸವಾರನಿಗೆ ಗಾಯಗಳಾಗಿದ್ದು, ಆತನನ್ನು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನವೀನ್ 35 ಗಾಯಾಳು, ಪತ್ನಿ ಪೂರ್ಣಿಮಾ 30 ಮೃತ ಮಹಿಳೆಯಾಗಿದ್ದು, ಇಬ್ಬರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ರುದ್ರಾಪುರ ಗ್ರಾಮದವರು ಎನ್ನಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.