ಬೆಂಗಳೂರು: ಮೊದಲು ಕೆಲಸ ಮಾಡ್ತಿದ್ದ ಸ್ಪಾ ನಲ್ಲಿ ಕೆಲಸ ಬಿಟ್ಟು, ಹೊಸ ಸಲೂನ್ ಮಾಡಿದ್ದಕ್ಕೆ ಸಲೂನ್ ಸಿಬ್ಬಂದಿಯ ಮೇಲೆ ಲೇಡಿ ಡಾನ್ ನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಭುವನೇಶ್ವರಿನಗರ ಮುಖ್ಯ ರಸ್ತೆಯಲ್ಲಿರು ಸ್ಪಾ ನಲ್ಲಿ 29 ರಂದು ರಾತ್ರಿ 8 ಘಂಟೆ ಸುಮಾರಿಗೆ ನಡೆದ ಘಟನೆಯಾಗಿದ್ದು, ಸಂಜು ಎಂಬಾತನೆ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು,
ಕೊಡಿಗೆಹಳ್ಳಿ ಸಮೀಪದ ಸಾರಾ ಸ್ಪಾನಲ್ಲಿ ಕೆಲಸ ಮಾಡ್ತಿದ್ದ. ಅಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದರಿಂದ ಅಲ್ಲಿ ಕೆಲಸ ಬಿಟ್ಟು ಸ್ವಂತ ಸಲೂನ್ ಮಾಡಿಕೊಂಡಿದ್ದ. ಇದರಿಂದ ಕೋಪಗೊಂಡ ಸಾರಾ ಸ್ಪಾ ಓನರ್ ನಿಶಾ, ಗ್ಯಾಂಗ್ ಕಟ್ಟಿಕೊಂಡು ಬಂದು,
ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!
ಸಂಜು ನಡೆಸ್ತಿದ್ದ ಸಲೂನ್ಗೆ ನುಗ್ಗಿ ಧಾಂಧಲೆ ನಡೆಸಿದ್ದಾರೆ. 10-15 ನಿಮಿಷಗಳ ಕಾಲ ಮನಸೋಇಚ್ಛೆ ಥಳಿಸಿ ಸಲೂನ್ನಿಂದ ನೀಲಿ ಬಣ್ಣದ ಕಾರಿನಲ್ಲಿ ಎತ್ತಾಕ್ಕೊಂಡು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಸಂಜು ದೂರು ನೀಡಿದ್ದಾರೆ.
ರೌಡಿ ಗ್ಯಾಂಗ್ನ ಅಟ್ಟಹಾಸದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಗ್ಯಾಂಗ್ ಗೆ ಸ್ಥಳೀಯ ರಾಜಕೀಯ ಮುಖಂಡ ಹಾಗೂ ರೌಡಿಶೀಟರ್ ಒಬ್ಬನ ಬೆಂಬಲ ಇದೆಯಂತೆ. ಇದೆ ಧೈರ್ಯದಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಸಲೂನ್ನ ಸಿಸಿಟಿವಿ ಕೇಬಲ್ಗಳನ್ನ ಕಿತ್ತಾಕಿ ಧಾಂಧಲೆ ನಡೆಸಿದ್ದಾರೆ ಎಂದು ದೂರಿದ್ದು,
ಪೊಲೀಸರು ಹಲ್ಲೆಕೊರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಜು ದಂಪತಿ ಒತ್ತಾಯಿಸಿದ್ದಾರೆ. ರೌಡಿ ಪಟಾಲಂ ವಿರುದ್ಧ ಅಮೃತಹಳ್ಳಿ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಪರಾರಿಯಾದ ಹಲ್ಲೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.