ಬೆಂಗಳೂರು: ಲಗೇಜ್ ವಿಚಾರಕ್ಕೆ ವಿಮಾನದಲ್ಲಿ ಸಿಬ್ಬಂದಿ ಮತ್ತು ಪೊಲೀಸರ ಜೊತೆ ಮಹಿಳೆಯ ಕಿರಿಕ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ವಿಮಾನದ ಸಿಬ್ಬಂದಿ ಮತ್ತು ಪೊಲೀಸರ ಜೊತೆ ಮಹಿಳೆ ಕಿರಿಕ್ ಮಾಡಿದ್ದು, ಕಿರಿಕ್ ಮಾಡಿ ಗಲಾಟೆ ಮಾಡಿದ ಮಹಿಳೆ ವಿರುದ್ದ ಪ್ರಕರಣ ದಾಖಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಲಹಂಕ ಮೂಲದ ವ್ಯಾಸ್ ಹಿರಲ್ ಮೋಹನ್ ಬಾಯಿ ಎಂಬ ಮಹಿಳೆ ವಿರುದ್ದ ಪ್ರಕರಣ ದಾಖಲಾಗಿದ್ದು, ಜೂನ್ 17 ಕೆಐಎಬಿಯಿಂದ ಸೂರತ್ಗೆ AI 2749 F ವಿಮಾನದಲ್ಲಿ ಮಹಿಳೆ ತೆರಳುತ್ತಿದ್ದರು ಎನ್ನಲಾಗಿದೆ.
ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?
ಈ ವೇಳೆ ಪ್ಲೈಟ್ ನಲ್ಲಿ ಬೋರ್ಡಿಂಗ್ ಆಗಿ ಲಗೇಜ್ ಅನ್ನು ಸೀಟ್ ಬಳಿ ಮಹಿಳೆ ಬಿಟ್ಟಿದ್ದರು. ಲಗೇಜ್ ಬಗ್ಗೆ ಪ್ರಶ್ನಿಸಿದಕ್ಕೆ ಪ್ಲೈಟ್ ಕ್ರ್ಯೂ ಸಿಬ್ಬಂದಿ ಜೊತೆ ಅನುಚಿತವಾಗಿ ಮಹಿಳೆ ನಡೆದುಕೊಂಡಿದ್ದರು ಎನ್ನಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.