ವಿಜಯಪುರ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ ಮುಂದುವರೆದಿದೆ. ಬಿಜೆಪಿ ನಗರ ಮಂಡಲ ಅಧ್ಯಕ್ಷ , ಬಿಜೆಪಿ ನಗರ ಮಂಡಲ ಎಸ್ ಟಿ ಮೋರ್ಚಾ ಅಧ್ಯಕ್ಷ, ನಗರ ಮಂಡಲ ರೈತ ಮೊರ್ಚಾ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಎಸ್ ಟಿ ಸೋಮಶೇಖರ್
ನಗರ ಮಂಡಲ ರೈತ ಮೊರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಟೀಕಾರ, ರೈತ ಮೊರ್ಚಾ ನಗರ ಮಂಡಲ ಅಧ್ಯಕ್ಷ ರಾಚು ಬಿರಾದಾರ ಹಾಗೂ ಬಿಜೆಪಿ ನಗರ ಮಂಡಲ ಅಧ್ಯಕ್ಷ ಸ್ಥಾನಕ್ಕೆ ಶಂಕರ್ ಹೂಗಾರ್ ನಗರ ಮಂಡಲ ಯುವ ಮೊರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ನಂದು ಗಡಗಿ, ನಗರ ಮಂಡಲ ಒಬಿಸಿ ಮೊರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ಭೀಮು ಮಾಶ್ಯಾಳ , ಒಬಿಸಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಪಿಂಟು ಚೋರಗಿ , ನಗರ ಮಂಡಲ ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ್ ಗೊಳಸಂಗಿ, ನಗರ ಮಂಡಲ ಕಾರ್ಯಾಲಯ ಕಾರ್ಯದರ್ಶಿ ಅಮೀತ ಗರುಡಕರ ಸೇರಿದಂತೆ ಹಲವರು ತಮ್ಮ ರಾಜೀನಾಮೆ ನೀಡಿದ್ದಾರೆ.
ಇನ್ನೂ ಯತ್ನಾಳ್ ಪರವಾಗಿ ನಿಂತು ರಾಜೀನಾಮೆ ನೀಡಿರುವ ಬಹಹುತೇಕ ಬಿಜೆಪಿ ಕಾರ್ಯಕರ್ತರು, ರಾಜೀನಾಮೆ ನೀಡಿ ಸಾಮಾಜಿಕ ಜಾಲತಾಣದಲ್ಲಿ I Stand With Yatnal ಎಂದು ಪೋಸ್ಟ್ ಹಾಕಿದ್ದಾರೆ.