ಬೆಂಗಳೂರು: ಯಡಿಯೂರಪ್ಪ ಮಗ ಒತ್ತಡ ತಂದು ನನ್ನ ಉಚ್ಚಾಟನೆ ಮಾಡಿಸಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮಗ ಒತ್ತಡ ತಂದು ನನ್ನ ಉಚ್ಚಾಟನೆ ಮಾಡಿಸಿದ್ದಾರೆ. ಯಾವ ವೀರಶೈವ ಲಿಂಗಾಯತರು ಯಡಿಯೂರಪ್ಪ ಜೊತೆಗಿಲ್ಲ.
ಭ್ರಮೆಯಿಂದ ಕೇಂದ್ರದವರು ಹೊರಗೆ ಬರಬೇಕು. ರಾಮಾಯಣ, ಮಹಾಭಾರತದಲ್ಲೂ ಅಪಮಾನ ಮಾಡಿರೋದಿದೆ. ಹಾಗಾಗಿ ನನಗೆ ಯಾವ ಮುಜುಗರವೂ ಇಲ್ಲ. ಬಿಎಸ್ವೈ ಕುಟುಂಬವನ್ನು ನಾನು ಹೊರಗೆ ಇಡೋವರೆಗೂ ಬಿಡೋದಿಲ್ಲ ಅಂತ ಶಪಥ ಮಾಡಿದ್ದಾರೆ.
ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು ಹೀಗೆ ಮಾಡಿ: ಈ 4 ಸ್ಥಳಗಳಲ್ಲಿ ದೀಪ ಹಚ್ಚುವುದನ್ನು ಮರೆಯಬೇಡಿ..!
ನಾನು ಮತ್ತೆ ದೆಹಲಿಗೆ ಹೋಗಲ್ಲ. ಮರುಪರಿಶೀಲನೆಗೆ ನಾನು ಮನವಿ ಮಾಡಲ್ಲ. ನಾನು ಹಿಂದೂ ಪರವಾಗಿ ಹೋರಾಟ ಮಾಡ್ತೇನೆ. ಇಡೀ ರಾಜ್ಯ ಸುತ್ತುತ್ತೇನೆ. ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡ್ತಿದ್ದಾರೆ. ಹಿಂದೂಗಳ ರಕ್ಷಣೆ ಮಾಡುವವರು ಯಾರೂ ಇಲ್ಲ. ಉ.ಕರ್ನಾಟಕದ ಬಗ್ಗೆ ಮಾತನಾಡುವವರು ಯಾರೂ ಇಲ್ಲ. ನಮ್ಮ ಹಿಂದೆ ಬಹಳ ದೊಡ್ಡ ಶಕ್ತಿ ಇದೆ ಎಂದು ಹೇಳಿದರು.