ಬೆಂಗಳೂರು: ಓಬಳಾಪುರ ಮೈನಿಂಗ್ ಕೇಸ್ನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ಶಾಕ್ ಎದುರಾಗಿದೆ. ಅಕ್ರಮ ಗಣಿಗಾರಿಕೆಯ ವಿಚಾರಣೆ ನಡೆಸಿದ ಹೈದರಾಬಾದ್ ಸಿಬಿಐ ವಿಶೇಷ ನ್ಯಾಯಾಲಯ ಇಂದು 5 ಅಪರಾಧಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆ ಪ್ರಕಟ ಮಾಡಿದೆ.
ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಈಗ ಅಪರಾಧಿ ಆಗಿದ್ದಾರೆ. ಸಿಬಿಐ ವಿಶೇಷ ಕೋರ್ಟ್ನಿಂದ ಅಂತಿಮ ತೀರ್ಪು ಪ್ರಕಟವಾಗಿದ್ದು, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಈಗ ಶಾಸಕ ಸ್ಥಾನದಿಂದಲೂ ಅನರ್ಹರಾಗಿದ್ದಾರೆ.
ಮನೆಯ ಕೀ ಎಲ್ಲಿಡುತ್ತಿದ್ದೀರಾ!? ಈ ದಿಕ್ಕಿನಲ್ಲಿ ಇಡಲೇಬಾರದಂತೆ! ಜ್ಯೋತಿಷ್ಯ ಹೇಳುವುದು ಹೀಗೆ!
ನ್ಯಾಯಾಲಯದ ವಿಚಾರಣೆ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿ ಇಂದು ಬೆಳಗ್ಗೆ ಹೈದರಾಬಾದ್ ಗೆ ತೆರಳಿದ್ದರು. ಇನ್ನು ಏಳು ವರ್ಷ ನೀಡಿರುವ ಶಿಕ್ಷೆಯಲ್ಲಿ ಕಡಿಮೆ ಮಾಡಿ ಎಂದು ಜನಾರ್ದನ ರೆಡ್ಡಿ ಅವರು ಕೋರ್ಟ್ಗೆ ಮನವಿ ಮಾಡಿದ್ದಾರೆ. ನಾನು ಈಗಾಗಲೇ ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಕಳೆದಿದ್ದೇನೆ. ನನ್ನ ವಯಸ್ಸು ಮತ್ತು ನಾನು ಮಾಡಿದ ಸಾರ್ವಜನಿಕ ಸೇವೆಯನ್ನು ಪರಿಗಣಿಸಿ.
ಬಳ್ಳಾರಿ ಮತ್ತು ಗಂಗಾವತಿಯ ಜನರು ನನ್ನನ್ನು ಭಾರಿ ಬಹುಮತದಿಂದ ಆಯ್ಕೆ ಮಾಡಿದ್ದಾರೆ. ನಾನು ಸಾರ್ವಜನಿಕ ಸೇವೆಗೆ ಸಮರ್ಪಿತನಾಗಿದ್ದೇನೆ . ಸಾರ್ವಜನಿಕರಿಂದ ನನಗೆ ಸಿಗುವ ಬೆಂಬಲವು ಆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ದಯವಿಟ್ಟು ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್ಗೆ ಅಂಗಲಾಚಿದ್ದಾರೆ. ಆದ್ರೆ, ಕೋರ್ಟ್ ನಿರಾಕರಿಸಿದೆ. ನಿಮಗೆ 10 ವರ್ಷಗಳ ಶಿಕ್ಷೆಯನ್ನು ಏಕೆ ನೀಡಬಾರದು? ನೀವು ಜೀವಾವಧಿ ಶಿಕ್ಷೆಗೆ ಅರ್ಹರು ಎಂದು ತಪರಾಕಿ ಹಾಕಿ ರೆಡ್ಡಿ ಮನವಿಯನ್ನು ತಿರಸ್ಕರಿಸಿದೆ.