ಪಂಜಾಬ್: ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಉಗ್ರರು ದಾಳಿ ಮಾಡಿದ್ದು, ಇದರಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಇದಾದ ಬಳಿಕ ಭಾರತೀಯ ಸೇನೆ ಮೇ 7ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು.
ಬಳಿಕ ಪಾಕ್ ಹಾಗೂ ಭಾರತ ನಡುವಿನ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಇದರ ಮಧ್ಯೆ ಇದೀಗ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಇದೇ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಇದೀಗ ಪಂಜಾಬ್‌ನ ಅದಂಪುರ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ವಾಯುಪಡೆಯ ಸಿಬ್ಬಂದಿಯ ಬಳಿ ಮಾಹಿತಿ ಪಡೆದಿದ್ದಾರೆ.
#WATCH | Prime Minister Narendra Modi, members of the Armed Forces chant 'Vande Mataram' & 'Bharat Mata Ki Jai'
Earlier this morning, PM Modi went to Air Force Station Adampur and met brave air warriors and soldiers. pic.twitter.com/5M5oa67a94
— ANI (@ANI) May 13, 2025
ಹಾಗೇ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ. ನಿಮ್ಮ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರು ಸೈನಿಕರ ಗುಣಗಾನ ಮಾಡಿದರು. ಸೈನಿಕರು ಸಂತೋಷದಿಂದ ಪ್ರಧಾನಿ ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ.
ಭಾರತದ “ಆಪರೇಷನ್ ಸಿಂಧೂರ್” ನಂತರ, ಮೇ 9 ಮತ್ತು 10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಮ್‌ಪುರವೂ ಒಂದು. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು.