ಯುವ ರಾಜ್ಕುಮಾರ್ ನಟನೆಯ ಎರಡನೇ ಸಿನಿಮಾ ಎಕ್ಕ ಶೂಟಿಂಗ್ ಭರದಿಂದ ಸಾಗುತ್ತಿದ್ದು, ನಾಳೆ ಯುವ ಹುಟ್ಟುಹಬ್ಬ ಇರೋ ಕಾರಣದಿಂದ ಎಕ್ಕ ಸಿನಿಮಾದ ಟೀಸರ್ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ.
ನಾಳೆ ಯುವ ಬರ್ತ್ ಡೇ, ನಾಳಿದ್ದು ಅಣ್ಣಾವ್ರ ಬರ್ತ್ ಡೇ ಇರೋದ್ರಿಂದ ದೊಡ್ಮನೆ ಅಭಿಮಾನಿಗಳಿಗೆ ಡಬಲ್ ಧಮಾಕ ಸಿಕ್ಕಂತಾಗಿದೆ.. ಯುವ ತುಂಬಾ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ತಿದ್ದು, ಈಗಾಗಲೇ ಎಕ್ಕ ಟ್ರೆಂಡ್ ಸೆಟ್ಟರ್ ಆಗಿ ಜನರ ಕುತೂಹಲ ಕೆರಳಿಸುತ್ತಿದೆ.
ಎಕ್ಕ ಸಿನಿಮಾ ಜೂನ್ 6ಕ್ಕೆ ಬಿಡುಗಡೆ ಆಗಲಿದೆ. ಹೀಗಾಗಿ ಅದಕ್ಕೆ ತಕ್ಕಂತೆ ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ಸ್, ಪ್ರಮೋಷನ್ ಹಾಗೂ ರಿಲೀಸ್ ಪ್ಲ್ಯಾನ್ ನಡೀತಿದೆ. ಪಿಆರ್ಕೆ ಪ್ರೊಡಕ್ಷನ್ಸ್, ಕೆಆರ್ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲ್ಮ್ಸ್ ಒಟ್ಟಾಗಿ ‘ಎಕ್ಕ’ ಚಿತ್ರ ನಿರ್ಮಾಣ ಮಾಡುತ್ತಿವೆ. ಬಹಳ ಅದ್ಧೂರಿಯಾಗಿಯೇ ಈ ಆಕ್ಷನ್ ಥ್ರಿಲ್ಲರ್ ಪ್ರೇಕ್ಷಕರ ಮುಂದೆ ಬರಲಿದೆ.
ರೋಹಿತ್ ಪದಕಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ‘ಎಕ್ಕ’ ಸಿನಿಮಾದಲ್ಲಿ ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿ. ಸಂಜನಾ ಆನಂದ್, ಸಂಪದಾ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ.
ರೋಹಿತ್ ಪದಕಿ, ವಿಕ್ರಂ ಹತ್ವಾರ್ ಜೊತೆಗೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇನ್ನು, ನಿರ್ದೇಶನವೂ ಅವರದ್ದೇ. ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್ ಕುಮಾರ್ ಸಂಕಲನ ‘ಎಕ್ಕ’ ಸಿನಿಮಾಗಿದೆ. ಈ ಸಿನಿಮಾ ಮೂಲಕ ಭೂಗತ ಜಗತ್ತಿನ ಕಥೆಯನ್ನು ಬಿಚ್ಚಿಡುತ್ತಿದ್ದಾರೆ.